ಶುಕ್ರವಾರ, ಡಿಸೆಂಬರ್ 9, 2022
21 °C

ಪಿಎಫ್‌ಐ ಮಾತ್ರ ಏಕೆ, ಆರ್‌ಎಸ್‌ಎಸ್‌ ನಿಷೇಧ ಯಾವಾಗ: ಕಾಂಗ್ರೆಸ್ ಸಂಸ‌ದ ಪ್ರಶ್ನೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ಆದೇಶವನ್ನು ಕೇರಳದ ಕಾಂಗ್ರೆಸ್ ಸಂಸ‌ದ ಕೋಡಿಕುನ್ನಿಲ್‌ ಸುರೇಶ್‌ ಟೀಕಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿದ ರೀತಿಯಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರ್‌ಎಸ್‌ಎಸ್‌) ಸಹ ನಿಷೇಧಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಕೇವಲ ಪಿಎಫ್‌ಐ ನಿಷೇಧಿಸುವುದೊಂದೇ ಪರಿಹಾರವಲ್ಲ. ಆರ್‌ಎಸ್‌ಎಸ್‌ ಕೂಡ ದೇಶದಾದ್ಯಂತ ಹಿಂದೂ ಕೋಮುವಾದವನ್ನು ಹರಡುತ್ತಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ. 

ಆರ್‌ಎಸ್‌ಎಸ್ ಮತ್ತು ಪಿಎಫ್‌ಐ ಎರಡೂ ಸಮಾನ, ಆದ್ದರಿಂದ ಸರ್ಕಾರ ಎರಡನ್ನೂ ನಿಷೇಧಿಸಬೇಕು. ಪಿಎಫ್‌ಐಗೆ ಮಾತ್ರ ಏಕೆ ನಿಷೇಧ ಎಂದು ಕೋಡಿಕುನ್ನಿಲ್‌ ಸುರೇಶ್‌ ಪ್ರಶ್ನಿಸಿದ್ದಾರೆ. 

ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ. 

ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಾದ ರಿಹಾಬ್ ಇಂಡಿಯಾ ಫೌಂಡೇಶನ್ (ಆರ್‌ಐಎಫ್), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ), ಎನ್‌ಸಿಎಚ್‌ಆರ್‌ಒ, ನ್ಯಾಷನಲ್‌ ವುಮೆನ್ಸ್‌ ಫ್ರಂಟ್‌ (ಎನ್‌ಡಬ್ಲ್ಯೂಎಫ್‌), ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಸೇರಿದಂತೆ ಎಂಟು ಸಂಘಟನೆಗಳನ್ನು ನಿಷೇಧಿಸಲಾಗಿದೆ.

ಓದಿ... 

ದೇಶದಲ್ಲಿ 5 ವರ್ಷಗಳ ಅವಧಿಗೆ ಪಿಎಫ್‌ಐ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ 

ಪಿಎಫ್‌ಐ ನಿಷೇಧ: ಕೇಂದ್ರ ಸರ್ಕಾರದ ಆದೇಶ ಸ್ವಾಗತಾರ್ಹ ಎಂದ ಆರಗ ಜ್ಞಾನೇಂದ್ರ  

ಪಿಎಫ್‌ಐ ನಿಷೇಧ: ವಿದ್ರೋಹಿ ಮನಸ್ಥಿತಿಯವರನ್ನು ಸಮಾಜವೂ ಬ್ಯಾನ್ ಮಾಡಲಿ– ಸಿಟಿ ರವಿ 

ಪಿಎಫ್ಐ ಸಂಘಟನೆ ನಿಷೇಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ 

ಪಿಎಫ್‌ಐ ನಿಷೇಧ: ಪ್ರಧಾನಿ ಮೋದಿ, ಅಮಿತ್‌ ಶಾಗೆ ಧನ್ಯವಾದ ಸಲ್ಲಿಸಿದ ಈಶ್ವರಪ್ಪ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು