ಭಾನುವಾರ, ಮಾರ್ಚ್ 26, 2023
31 °C

ಆರ್‌ಎಸ್‌ಎಸ್‌ನಿಂದ ‘ಗರ್ಭ ಸಂಸ್ಕಾರ’ ಅಭಿಯಾನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಗರ್ಭದಲ್ಲಿರುವ ಶಿಶುಗಳಿಗೆ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಕಲಿಸಲು ಗರ್ಭಿಣಿಯರಿಗೆ ‘ಗರ್ಭ ಸಂಸ್ಕಾರ’ ಎನ್ನುವ ಅಭಿಯಾನವನ್ನು ಆರಂಭಿಸಲಾಗಿದೆ’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್ಎಸ್‌) ಅಂಗಸಂಸ್ಥೆಯಾದ ಸಂವರ್ಧಿನಿ ನ್ಯಾಸ್‌ನ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮಾಧುರಿ ಮರಾಠೆ ಸೋಮವಾರ ಹೇಳಿದ್ದಾರೆ.

ಗರ್ಭದಲ್ಲಿರುವ ಶಿಶುಗಳಿಗೆ ಗೀತಾ ಪಠಣ, ರಾಮಾಯಣ, ಯೋಗಾಭ್ಯಾಸದ ಮೂಲಕ ಸಾಂಸ್ಕೃತಿಕ ಮೌಲ್ಯಗಳನ್ನು ಕಲಿಸಲು ಸ್ತ್ರೀರೋಗ ತಜ್ಞರು, ಆಯುರ್ವೇದ ವೈದ್ಯರು ಮತ್ತು ಯೋಗ ತರಬೇತುದಾರರೊಂದಿಗೆ ಸಂವರ್ಧಿನಿ ನ್ಯಾಸ್ ಕಾರ್ಯಕ್ರಮ ಯೋಜಿಸುತ್ತಿದೆ. 

‘ಗರ್ಭಾವಸ್ಥೆಯಲ್ಲಿರುವಾಗಲೇ ಶಿಶುವು ಸಂಸ್ಕೃತಿ ಮತ್ತು ಮೌಲ್ಯವನ್ನು ಕಲಿಯುವುದು ಈ ಅಭಿಯಾನದ ಉದ್ದೇಶವಾಗಿದೆ. ಇದು ಮಗುವಿಗೆ ಎರಡು ವರ್ಷ ಆಗುವವರೆಗೆ ಈ ಪ್ರಕ್ರಿಯೆಯು ಮುಂದುವರಿಯಲಿದೆ. ‘ಗರ್ಭ ಸಂಸ್ಕಾರ’ದಲ್ಲಿ ಗೀತಾ ಶ್ಲೋಕಗಳ ಪಠಣ, ರಾಮಾಯಣದ ಸಾಲುಗಳ ಪಠಣಕ್ಕೆ ಒತ್ತು ನೀಡಲಾಗುವುದು. ಗರ್ಭದಲ್ಲಿರುವ ಶಿಶುವು 500 ಪದಗಳನ್ನು ಕಲಿಯಬಹುದು’ ಎಂದು ಮಾಧುರಿ ಮರಾಠೆ ಹೇಳಿದ್ದಾರೆ. 

‘ಆರ್‌ಎಸ್‌ಎಸ್‌ನ ಮಹಿಳಾ ಘಟಕವಾದ ರಾಷ್ಟ್ರ ಸೇವಿಕಾ ಸಮಿತಿಯ ಅಂಗಸಂಸ್ಥೆಯಾಗಿರುವ ಸಂವರ್ಧಿನಿ ನ್ಯಾಸ್ ಈ ಅಭಿಯಾನವನ್ನು ಕನಿಷ್ಠ ಒಂದು ಸಾವಿರ ಮಹಿಳೆಯರಿಗೆ ತಲುಪಿಸಲು ಚಿಂತನೆ ನಡೆಸಿದೆ. ಅಭಿಯಾನದ ಭಾಗವಾಗಿ, ನ್ಯಾಸ್ ಭಾನುವಾರ ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಕಾರ್ಯಾಗಾರವನ್ನು ನಡೆಸಿದೆ. ಇದರಲ್ಲಿ ದೆಹಲಿ–ಏಮ್ಸ್‌ನ ಸ್ತ್ರೀರೋಗ ತಜ್ಞರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು’ ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು