ಮಂಗಳವಾರ, ಸೆಪ್ಟೆಂಬರ್ 21, 2021
21 °C

ಕೇರಳದಿಂದ ತಮಿಳುನಾಡಿಗೆ ಬರುವವರಿಗೆ ಆರ್‌ಟಿಪಿಸಿಆರ್ ವರದಿ ಕಡ್ಡಾಯ: ಸುಬ್ರಮಣಿಯನ್

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಚೆನ್ನೈ: ಇದೇ ಆಗಸ್ಟ್‌ 5ರಿಂದ ಕೇರಳದಿಂದ ತಮಿಳುನಾಡಿಗೆ ಬರುವವರಿಗೆ ಆರ್‌ಟಿ–ಪಿಸಿಆರ್‌ ವರದಿ ಕಡ್ಡಾಯ ಎಂದು ತಮಿಳುನಾಡು ಆರೋಗ್ಯ ಸಚಿವ ಸುಬ್ರಮಣಿಯನ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇರಳದಲ್ಲಿ ಕೋವಿಡ್‌ ಹೊಸ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣಕ್ಕೆ ಈ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಹೇಳಿದ್ದಾರೆ.

ಕೇರಳದಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತಜ್ಞರ ತಂಡವನ್ನು ಈಗಾಗಲೇ ಕಳುಹಿಸಿದೆ. ಜತೆಗೆ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇರಳ ಸರ್ಕಾರ ವಾರಾಂತ್ಯದ ಕರ್ಪ್ಯೂ ಜಾರಿಗೊಳಿಸಿದೆ.

ಕೇರಳದಲ್ಲಿ ಶನಿವಾರ 20,600 ಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿ ಆಗಿವೆ. ಸದ್ಯ 1,65,011 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ... Covid-19 India Update: 41 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ, 541 ಮಂದಿ ಸಾವು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು