ನವದೆಹಲಿ: ಕೊರೊನಾ ವೈರಾಣುವಿನ ಹೊಸ ರೂಪಾಂತರ ತಳಿ ಹರಡುತ್ತಿರುವ ಕಾರಣ ಭಾರತದ ವಿಮಾನ ನಿಲ್ದಾಣಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಲಾಗಿದೆ. ದಕ್ಷಿಣ ಆಫ್ರಿಕಾ ಮತ್ತು ಚೀನಾ ಸೇರಿ ಏಳು ದೇಶಗಳಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಿದೆ.
ಬೊಟ್ಸ್ವಾನ, ಬಾಂಗ್ಲಾದೇಶ, ಮಾರಿಷಸ್, ನ್ಯೂಜಿಲ್ಯಾಂಡ್ ಮತ್ತು ಜಿಂಬಾಬ್ವೆ ಈ ಪಟ್ಟಿಯಲ್ಲಿರುವ ಇತರ ದೇಶಗಳು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಗುರುವಾರ ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ಮತ್ತು ಇತರ ದೇಶಗಳಲ್ಲಿ ಸಿ.1.2 ರೂಪಾಂತರ ತಳಿ ಕಂಡುಬಂದಿರುವುದು ವರದಿಯಾಗುತ್ತಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.
ಮೊದಲಿಗೆ ಹೊಸ ತಳಿ ದಕ್ಷಿಣ ಆಫ್ರಿಕಾದ ಎಂಪುಮಲಂಗ ಮತ್ತು ಗೌಟೆಂಗ್ ಪ್ರಾಂತ್ಯದಲ್ಲಿ ಕಂಡುಬಂದಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.