ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆಗೆ ಶೀಘ್ರ ನಿಯಮ: ಚುನಾವಣಾ ಆಯುಕ್ತ

ನವದೆಹಲಿ (ಪಿಟಿಐ): ಚುನಾವಣಾ ಗುರುತಿನ ಚೀಟಿ ಜೊತೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವ ಕುರಿತು ಸರ್ಕಾರ ಶೀಘ್ರದಲ್ಲಿಯೇ ನಿಯಮಗಳನ್ನು ಪ್ರಕಟಿಸಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ.
‘ಆದರೆ, ಆಧಾರ್ ಸಂಖ್ಯೆ ಜೋಡಣೆ ಮಾಡುವುದನ್ನು ಮತದಾರರ ವಿವೇಚನೆಗೆ ಬಿಡಲಾಗುವುದು. ಅಕಸ್ಮಾತ್ ಜೋಡಣೆ ಮಾಡಲು ನಿರಾಕರಿಸಿದ್ದಲ್ಲಿ ಅದಕ್ಕೆ ಸೂಕ್ತ ಕಾರಣ ತಿಳಿಸುವುದು ಅಗತ್ಯವಾಗಿದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಸ್ಥಾನದಿಂದ ನಿವೃತ್ತರಾಗುತ್ತಿರುವ ಅವರು ಶನಿವಾರ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ, ತಮ್ಮ ಅವಧಿಯಲ್ಲಿ ಜಾರಿಗೊಳಿಸಿದ ಎರಡು ಪ್ರಮುಖ ಸುಧಾರಣೆಗಳಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ವರ್ಷದಲ್ಲಿ ನಾಲ್ಕು ಬಾರಿ ಅವಕಾಶ ಕಲ್ಪಿಸಿದ್ದು ಹಾಗೂ ಮತದಾರರ ಹೆಸರು ಪುನರಾವರ್ತನೆ ತಪ್ಪಿಸಲು ಆಧಾರ್ ಸಂಖ್ಯೆಗೆ ಜೋಡಣೆ ಮಾಡುವುದು ಸೇರಿದೆ ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.