ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಗಾಕ್ಕಾಗಿ ₹25,000 ಕೋಟಿ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ

Last Updated 1 ನವೆಂಬರ್ 2022, 15:26 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗಾಗಿ (ನರೇಗಾ) ₹25,000 ಕೋಟಿ ಹೆಚ್ಚುವರಿ ಅನುದಾನ ನೀಡುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಬೇಡಿಕೆ ಸಲ್ಲಿಸಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಈ ತಿಂಗಳ ಎರಡನೇ ವಾರದಲ್ಲಿ ಹಣ ಹಂಚಿಕೆಯಾಗುವ ನಿರೀಕ್ಷೆ ಇದೆ. 2022–23ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ₹73,000 ಕೋಟಿ ಅನುದಾನವನ್ನು ನರೇಗಾಕ್ಕೆ ನೀಡಲಾಗಿತ್ತು. ಇದರಲ್ಲಿ ₹54,000 ಕೋಟಿಯನ್ನು ಈಗಾಗಲೇ ರಾಜ್ಯಗಳಿಗೆ ಹಂಚಿಕೆ ಮಾಡಲಾಗಿದೆ. ಈ ಬಾರಿಯ ನರೇಗಾಗ ಒಟ್ಟು ವೆಚ್ಚವು ₹98,000 ಕೋಟಿ ತಗುಲುವ ನಿರೀಕ್ಷೆ ಇದೆ. ಸರ್ಕಾರವು ಸಂಸತ್ತಿನ ಅನುಮೋದನೆ ಪಡೆದು ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲಿದೆ ಎಂದುಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT