ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ 100 ಸ್ವಯಂ ಸೇವಕರ ಮೇಲೆ ನಡೆಯಲಿದೆ 'ಸ್ಪುಟ್ನಿಕ್‌ ವಿ' ಲಸಿಕೆ ಪ್ರಯೋಗ

Last Updated 23 ಅಕ್ಟೋಬರ್ 2020, 5:25 IST
ಅಕ್ಷರ ಗಾತ್ರ

ನವದೆಹಲಿ: ಭಾರತದ 100 ಸ್ವಯಂ ಸೇವಕರ ಮೇಲೆ ರಷ್ಯಾದಲ್ಲಿ ಅಭಿವೃದ್ಧಿಪಡಿಸಿರುವ ಕೋವಿಡ್‌–19 ಪ್ರಾಯೋಗಿಕ ಲಸಿಕೆ 'ಸ್ಪುಟ್ನಿಕ್‌ ವಿ' ಪ್ರಯೋಗ ನಡೆಯಲಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

'100 ಸ್ವಯಂ ಸೇವಕರ ಮೇಲೆ ಲಸಿಕೆ ಪ್ರಯೋಗ ನಡೆಸಲಾಗುವುದು' ಭಾರತೀಯ ಔಷಧ ನಿಯಂತ್ರಣ ಸಂಸ್ಥೆ (ಡಿಜಿಸಿಐ) ಹೇಳಿರುವುದಾಗಿ ವರದಿಯಲ್ಲಿದೆ.

ಭಾರತದಲ್ಲಿ ‘ಸ್ಪುಟ್ನಿಕ್‌–ವಿ’ ಲಸಿಕೆ ಮಾರಾಟ ಹಾಗೂ ಕ್ಲಿನಿಕಲ್‌ ಟ್ರಯಲ್ಸ್‌ ನಡೆಸಲು ರಷ್ಯಾದ ಡೈರೆಕ್ಟ್‌ ಇನ್ವೆಸ್ಟ್‌ಮೆಂಟ್‌ ಫಂಡ್‌ (ಆರ್‌ಡಿಐಎಫ್‌) ಹೈದರಾಬಾದ್‌ನ ರೆಡ್ಡೀಸ್‌ ಲ್ಯಾಬೊರೇಟರಿ ಜೊತೆ ಒಪ್ಪಂದ ಮಾಡಿಕೊಂಡಿತ್ತು. ಇದೀಗ ಭಾರತದಲ್ಲಿ ಸ್ಪುಟ್ನಿಕ್ ವಿ ಲಸಿಕೆಯನ್ನು ಮಾನವನ ಮೇಲೆ ಪ್ರಯೋಗ ಮಾಡುವುದಕ್ಕೆ ಡಿಜಿಸಿಐಯಿಂದ ಅನುಮತಿ ಲಭಿಸಿರುವುದಾಗಿ ಹೈದರಾಬಾದ್‌ನ ಡಾ.ರೆಡ್ಡೀಸ್‌ ಲ್ಯಾಬೊರೇಟರೀಸ್‌ ಹೇಳಿದೆ.

ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ನಡೆಸುವ ಮುನ್ನ ಎರಡನೇ ಹಂತದ ಕ್ಲಿನಿಕಲ್ ಪ್ರಯೋಗದಲ್ಲಿನ 100 ವಿಷಯಗಳ ಬಗ್ಗೆ ಸುರಕ್ಷತೆ ಮತ್ತು ಇಮ್ಯುನೊಜೆನೆಸಿಟಿ ಡೇಟಾವನ್ನು ಸಿದ್ಧಪಡಿಸಬೇಕು ಮತ್ತು ಅದನ್ನು ಮೌಲ್ಯ ಮಾಪನಕ್ಕೆ ಸಲ್ಲಿಸಬೇಕು ಎಂದು ಅಕ್ಟೋಬರ್ 16ರಂದು ನಡೆದ ಸಭೆಯಲ್ಲಿ ಸಿಡಿಎಸ್‌ಸಿಒನ ವಿಷಯ ತಜ್ಞ ಸಮಿತಿ (ಎಸ್‌ಇಸಿ) ನಿರ್ಧರಿಸಿರುವುದಾಗಿ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ (ಸಿಡಿಎಸ್‌ಸಿಒ) ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ.

ಇದಕ್ಕೂ ಮೊದಲು ಸೆಪ್ಟೆಂಬರ್ 2020 ರಲ್ಲಿ ಡಾ. ರೆಡ್ಡೀಸ್ ಜತೆ ಆರ್‌ಡಿಐಎಫ್‌ ಸ್ಪುಟ್ನಿಕ್ ವಿ ಲಸಿಕೆಯ ಕ್ಲಿನಿಕಲ್ ಪ್ರಯೋಗ ಮತ್ತು ವಿತರಣೆಗೆ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದದ ಪ್ರಕಾರ ಆರ್‌ಡಿಐಎಫ್‌ 10 ಕೋಟಿ ಡೋಸ್‌ಗಳನ್ನು ಡಾ ರೆಡ್ಡೀಸ್ ಲ್ಯಾಬ್‌ಗೆ ಪೂರೈಸಲಿದೆ.

ಇದನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT