ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್‌ನ ಸುಮಿಯಿಂದ ಭಾರತದ ಎಲ್ಲ ವಿದ್ಯಾರ್ಥಿಗಳ ರಕ್ಷಣೆ: ಸರ್ಕಾರದ ಮಾಹಿತಿ

Last Updated 8 ಮಾರ್ಚ್ 2022, 14:40 IST
ಅಕ್ಷರ ಗಾತ್ರ

ನವದೆಹಲಿ: ಯುದ್ಧಪೀಡಿತ ಉಕ್ರೇನ್‌ನ ನಗರ ಸುಮಿಯಲ್ಲಿ ಸಿಲುಕಿದ್ದ ಎಲ್ಲ ಭಾರತೀಯರು, ವಿದ್ಯಾರ್ಥಿಗಳನ್ನು ಯಶಸ್ವಿಯಾಗಿ ಸ್ಥಳಾಂತರ ಮಾಡಿರುವುದಾಗಿ ಭಾರತ ಸರ್ಕಾರ ತಿಳಿಸಿದೆ.

ಈ ಬಗ್ಗೆ ಭಾರತೀಯ ವಿದೇಶಾಂಗ ಇಲಾಖೆಯ ವಕ್ತಾರ ಆರಿಂದಮ್‌ ಬಾಗ್ಚಿ ಟ್ವಿಟರ್‌ನಲ್ಲಿ ಮಂಗಳವಾರ ಮಾಹಿತಿ ಹಂಚಿಕೊಂಡಿದ್ದಾರೆ.

‘ಸುಮಿಯಿಂದ ಎಲ್ಲಾ ಭಾರತೀಯ ವಿದ್ಯಾರ್ಥಿಗಳನ್ನು ನಾವು ಹೊರಗೆ ಕರೆತಂದಿದ್ದೇವೆ ಎಂದು ತಿಳಿಸಲು ಹರ್ಷವಾಗಿದೆ’ ಎಂದು ಟ್ವೀಟ್ ಮಾಡಿದ್ದಾರೆ.

‘ಸುಮಿಯಿಂದ ಹೊರ ಕರೆತರಲಾದ ವಿದ್ಯಾರ್ಥಿಗಳು ಪೋಲ್ಟವಾ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದಾರೆ. ಅಲ್ಲಿಂದ ಅವರು ಪಶ್ಚಿಮ ಉಕ್ರೇನ್‌ಗೆ ರೈಲಿನ ಮೂಲಕ ತೆರಳಲಿದ್ದಾರೆ. ಅವರನ್ನು ತಾಯ್ನಾಡಿಗೆ ಕರೆತರಲು ‘ಆಪರೇಷನ್‌ ಗಂಗಾ’ ಕಾರ್ಯಾಚರಣೆಯ ಅಡಿಯಲ್ಲಿ ವಿಮಾನಗಳನ್ನು ನಿಯೋಜಿಸಲಾಗುತ್ತಿದೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT