ಶುಕ್ರವಾರ, ಆಗಸ್ಟ್ 19, 2022
22 °C

ಆಪರೇಷನ್ ಗಂಗಾ: ಯುದ್ಧಪೀಡಿತ ಉಕ್ರೇನ್‌ನಿಂದ ಮತ್ತೆ 240 ಮಂದಿ ಭಾರತೀಯರು ವಾಪಸ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಯುದ್ಧಪೀಡಿತ ಉಕ್ರೇನ್‌ನಿಂದ ನೆರೆಯ ದೇಶಗಳ ಮೂಲಕ ಭಾರತೀಯರನ್ನು ವಾಪಸ್ ಕರೆಸಿಕೊಳ್ಳುವ ಕಾರ್ಯಾಚರಣೆ ಚುರುಕುಪಡೆದುಕೊಂಡಿದೆ.

‘ಆಪರೇಷನ್ ಗಂಗಾ’ ಕಾರ್ಯಾಚರಣೆಯ ಆರನೇ ವಿಮಾನವು 240 ಭಾರತೀಯರನ್ನು ಕರೆದುಕೊಂಡು ಬುಡಾಪೆಸ್ಟ್‌ನಿಂದ ಹೊರಟಿದೆ. ಇದರೊಂದಿಗೆ ಸ್ಥಳಾಂತರ ಪ್ರಯತ್ನಗಳು ಚುರುಕುಪಡೆದುಕೊಂಡಿವೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 

ಈಗಾಗಲೇ ಐದು ವಿಮಾನಗಳಲ್ಲಿ ನೂರಾರು ಮಂದಿ ಭಾರತೀಯರು ತವರಿಗೆ ವಾಪಸಾಗಿದ್ದಾರೆ.

ಈ ಮಧ್ಯೆ, ಭಾರತೀಯರ ಸ್ಥಳಾಂತರ ಕಾರ್ಯಾಚರಣೆಗೆ ನೆರವಾಗುವ ಉದ್ದೇಶದಿಂದ ಕೇಂದ್ರದ ಸಚಿವರಾದ ಹರದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು, ವಿ.ಕೆ. ಸಿಂಗ್ ಅವರು ಉಕ್ರೇನ್ ನೆರೆ ದೇಶಗಳಿಗೆ ತೆರಳಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು