ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಪರೇಷನ್ ಗಂಗಾ: ಬುಡಾಪೆಸ್ಟ್‌ನಿಂದ 240 ಭಾರತೀಯರು ತಾಯ್ನಾಡಿಗೆ

Last Updated 27 ಫೆಬ್ರುವರಿ 2022, 2:52 IST
ಅಕ್ಷರ ಗಾತ್ರ

ನವದೆಹಲಿ: ಯುದ್ಧ ಪೀಡಿತ ಉಕ್ರೇನ್‌ನಿಂದ ಹಂಗೇರಿಗೆ ಸ್ಥಳಾಂತರಗೊಂಡಿದ್ದ 240 ಮಂದಿ ಭಾರತೀಯರನ್ನು ಒಳಗೊಂಡ ವಿಮಾನ ಭಾನುವಾರ ನಸುಕಿನಲ್ಲಿ ನವದೆಹಲಿಯತ್ತ ಪ್ರಯಾಣ ಬೆಳೆಸಿದೆ.

ಹಂಗೇರಿಯ ಬುಡಾಪೆಸ್ಟ್‌ನಿಂದ 240 ಮಂದಿ ಭಾರತೀಯರನ್ನೊಳಗೊಂಡ ವಿಮಾನ ದೆಹಲಿಯತ್ತ ಪ್ರಯಾಣ ಬೆಳೆಸಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮುನ್ನ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ 250 ಮಂದಿ ಭಾರತೀಯರು ಭಾನುವಾರ ಮುಂಜಾನೆ ನವದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಇವರನ್ನು ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ವಾಗತಿಸಿದ್ದಾರೆ.

ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ನೆರೆ ರಾಷ್ಟ್ರಗಳ ಮೂಲಕ ಭಾರತಕ್ಕೆ ಕರೆಸಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಭಾರತ ಸರ್ಕಾರವು ‘ಆಪರೇಷನ್ ಗಂಗಾ’ ತೆರವು ಕಾರ್ಯಾಚರಣೆ ಹಮ್ಮಿಕೊಂಡಿದೆ. ಇದರ ಮೊದಲ ಹಂತದಲ್ಲಿ 219 ಮಂದಿಯನ್ನು ಶನಿವಾರ ಮುಂಬೈಗೆ ಕರೆತರಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT