ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್ ಮೇಲಿನ ರಷ್ಯಾ ಆಕ್ರಮಣ ಗಂಭೀರ ವಿಚಾರ: ಜಪಾನ್‌ ಪ್ರಧಾನಿ ಫುಮಿಯೊ ಕಿಷಿಡ

Last Updated 20 ಮಾರ್ಚ್ 2022, 1:50 IST
ಅಕ್ಷರ ಗಾತ್ರ

ನವದೆಹಲಿ: ಉಕ್ರೇನ್ ಮೇಲಿನ ರಷ್ಯಾ ಆಕ್ರಮಣವು 'ತುಂಬಾ ಗಂಭೀರ' ವಿಚಾರವಾಗಿದ್ದು, ಇದು ಅಂತರರಾಷ್ಟ್ರೀಯ ಆದೇಶದ ಬುಡವನ್ನೇ ಅಲುಗಾಡಿಸಿದೆ. ತನ್ನ ಬಲಿಷ್ಠ ಸೇನಾ ಪಡೆಯನ್ನು ಬಳಸಿಕೊಂಡು ಯಾವುದೇ ದೇಶದ ಮೇಲೆ ದಾಳಿ ನಡೆಸುವುದನ್ನು ಸಹಿಸಲು ಆಗುವುದಿಲ್ಲ ಎಂದು ಜಪಾನ್‌ ಪ್ರಧಾನಿ ಫುಮಿಯೊ ಕಿಷಿಡ ಅಭಿಪ್ರಾಯ ಪಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್‌ ಪ್ರಧಾನಿ ಫುಮಿಯೊ ಕಿಷಿಡ ನಡುವೆ ಮಾತುಕತೆ ನಡೆದ ಬಳಿಕ ಭಾರತ ಮತ್ತು ಜಪಾನ್ ಜಂಟಿ ಹೇಳಿಕೆ ಬಿಡುಗಡೆ ಮಾಡಿ ಈ ವಿಚಾರವನ್ನು ತಿಳಿಸಿವೆ. ಉಕ್ರೇನ್‍‌ನಲ್ಲಿ ತಲೆದೋರಿರುವ ಸಂಘರ್ಷ ಮತ್ತು ಮಾನವೀಯ ಬಿಕ್ಕಟ್ಟಿನ ಬಗ್ಗೆ ಉಭಯ ನಾಯಕರು ಕಳವಳ ವ್ಯಕ್ತಪಡಿಸಿದರು.

ಮಾತುಕತೆ ಮತ್ತು ರಾಜತಾಂತ್ರಿಕತೆ ಮೂಲಕ ಕೂಡಲೇ ಹಿಂಸಾಚಾರವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಉಕ್ರೇನ್‌ನಲ್ಲಿ ತಲೆದೋರಿರುವ ಮಾನವೀಯ ಬಿಕ್ಕಟ್ಟನ್ನು ಪರಿಹರಿಸಲು ಉಭಯ ದೇಶಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿವೆ.

ಭಾರತ-ಜಪಾನ್ 14ನೇ ಮಾತುಕತೆಯ ಬಳಿಕ ಮೋದಿಯವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಲ ಪ್ರಯೋಗಿಸಿ ಒಂದು ರಾಷ್ಟ್ರದ ಯಥಾಸ್ಥಿತಿಯನ್ನು ಬದಲಾಯಿಸುವ ಏಕಪಕ್ಷೀಯ ಪ್ರಯತ್ನಕ್ಕೆ ಅವಕಾಶವನ್ನು ನೀಡಬಾರದು. ಉಕ್ರೇನ್ ಸಮಸ್ಯೆ ನಿವಾರಣೆಗೆ ಶಕ್ತಿಮೀರಿ ಪ್ರಯತ್ನಿಸಬೇಕಾಗಿದೆ ಎಂದು ಕಿಷಿಡ ಹೇಳಿದರು.

ಉಕ್ರೇನ್ ಮೇಲಿನ ರಷ್ಯಾ ಆಕ್ರಮಣವನ್ನು ನೇರವಾಗಿ ಉಲ್ಲೇಖಿಸದ ಪ್ರಧಾನಿ ನರೇಂದ್ರ ಮೋದಿ, ಸದ್ಯದ ಭೌಗೋಳಿಕ ರಾಜಕೀಯ ಘಟನೆಗಳು ನಮ್ಮೆದುರು ಹೊಸ ಸವಾಲುಗಳನ್ನು ತಂದೊಡ್ಡಿವೆ ಎಂದರು.

ಅಲ್ಲದೆ, ಭಾರತ-ಜಪಾನ್ ಬಾಂಧವ್ಯವನ್ನು ಗಾಢಗೊಳಿಸುವುದರಿಂದ ಉಭಯ ದೇಶಗಳಿಗೆ ಪ್ರಯೋಜನವಾಗುವುದಲ್ಲದೆ, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಸಮೃದ್ಧಿ ಮತ್ತು ಸ್ಥಿರತೆ ಉತ್ತೇಜಿಸಲು ನೆರವಾಗಲಿದೆ ಎಂದು ಮೋದಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT