ಶನಿವಾರ, ಜನವರಿ 29, 2022
17 °C

ಡಿ.6ರಂದು ರಷ್ಯಾ ಅಧ್ಯಕ್ಷ ಪುಟಿನ್‌ ಭಾರತ ಭೇಟಿ; ಪ್ರಧಾನಿ ಮೋದಿ ಜೊತೆ ಸಭೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಡಿಸೆಂಬರ್‌ 6ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ಪ್ರಕಟಿಸಿದೆ.

ಉಭಯ ರಾಷ್ಟ್ರಗಳ ನಡುವಣ ಒಪ್ಪಂದಗಳಿಗೆ ಸಂಬಂಧಿಸಿದಂತೆ ಭಾರತದ ಪ್ರಧಾನಿ ಮತ್ತು ರಷ್ಯಾದ ಅಧ್ಯಕ್ಷ ವಾರ್ಷಿಕ ಸಭೆಯಲ್ಲಿ ಪರಿಶೀಲನೆ ನಡೆಸುವ ವಾಡಿಕೆ ಇದೆ.

ಈ ಕುರಿತು ಮಾಹಿತಿ ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗಚಿ, ಭಾರತ–ರಷ್ಯಾ 21ನೇ ವಾರ್ಷಿಕ ಸಭೆಯಲ್ಲಿ ಭಾಗಿಯಾಗಲು ರಷ್ಯಾ ಅಧ್ಯಕ್ಷ ಪುಟಿನ್‌ ಅವರು ಡಿಸೆಂಬರ್‌ 6ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ.

ಕೋವಿಡ್‌–19 ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ಸಭೆಯನ್ನು ಮುಂದೂಡಲಾಗಿತ್ತು. ಈವರೆಗೂ ಭಾರತ ಮತ್ತು ರಷ್ಯಾದಲ್ಲಿ ಒಟ್ಟು 20 ವಾರ್ಷಿಕ ಸಭೆಗಳು ನಡೆದಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು