ಮಂಗಳವಾರ, ಜನವರಿ 25, 2022
28 °C

ಬಾಹ್ಯಾಕಾಶ ಆಯೋಗ, ಇಸ್ರೊ ಅಧ್ಯಕ್ಷರಾಗಿ ಸೋಮನಾಥ್‌ ನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬಾಹ್ಯಾಕಾಶ ವಿಜ್ಞಾನ ಸಂಸ್ಥೆ ಇಸ್ರೊ, ಬಾಹ್ಯಾಕಾಶ ಆಯೋಗದ ಅಧ್ಯಕ್ಷರನ್ನಾಗಿ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ಎಸ್‌.ಸೋಮನಾಥ್‌ ಅವರನ್ನು ಕೇಂದ್ರ ಸರ್ಕಾರ ಬುಧವಾರ ನೇಮಕ ಮಾಡಿದೆ. 

ಸೋಮನಾಥ್‌ ಅವರು ಪ್ರಸ್ತುತ ವಿಕ್ರಮ್‌ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದ (ವಿಎಸ್‌ಎಸ್‌ಸಿ) ನಿರ್ದೇಶಕರಾಗಿದ್ದಾರೆ.

ಸೋಮನಾಥ್‌ ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಮೂರು ವರ್ಷಗಳವರೆಗೆ ಅವರ ಅವಧಿ ಇರುತ್ತದೆ. 

ಕೆ.ಶಿವನ್ ಅಧಿಕಾರ ಅವಧಿ ಜನವರಿ 14ರಂದು ಕೊನೆಗೊಳ್ಳಲಿದ್ದು ಅವರ ಉತ್ತರಾಧಿಕಾರಿಯಾಗಿ ಸೋಮನಾಥ್‌ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು