ಶುಕ್ರವಾರ, ಏಪ್ರಿಲ್ 16, 2021
28 °C

ಮಕರವಿಳಕ್ಕು ಉತ್ಸವಕ್ಕೆ ಸಜ್ಜುಗೊಂಡ ಶಬರಿಮಲೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶಬರಿಮಲೆ: ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಮಕರವಿಳಕ್ಕು ಉತ್ಸವಕ್ಕೆ ಶಬರಿಮಲೆ ಸಜ್ಜಾಗಿದೆ.

ದೇವಸ್ಥಾನ ಪ್ರವೇಶಿಸಲು ಭಕ್ತರಿಗೆ ಗುರುವಾರ ಬೆಳಿಗ್ಗೆಯಿಂದ ಅವಕಾಶ ನೀಡಲಾಗುತ್ತದೆ. ಆದರೆ, ಬುಧವಾರ ಸಂಜೆಯೇ ದೇವಸ್ಥಾನದ ಬಾಗಿಲು ತೆರೆಯಲಾಗಿದೆ ಎಂದು ತಿರುವಾಂಕೂರು ದೇವಸ್ವ ಮಂಡಳಿ (ಟಿಡಿಬಿ) ಅಧಿಕಾರಿಗಳು ತಿಳಿಸಿದರು.

ಮಕರವಿಳಕ್ಕು ಉತ್ಸವ ಜನವರಿ 14ರಂದು ನಡೆಯಲಿದ್ದು, ಜ. 20ರಂದು ದೇವಸ್ಥಾನವನ್ನು ಬಂದ್‌ ಮಾಡಲಾಗುತ್ತದೆ.

ಕೋವಿಡ್–19 ಹಿನ್ನೆಲೆಯಲ್ಲಿ ಸಾಕಷ್ಟು ನಿರ್ಬಂಧಗಳ ನಡುವೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ದಿನಕ್ಕೆ 5,000 ಭಕ್ತರಿಗೆ ಮಾತ್ರ ದೇವಸ್ಥಾನ ಪ್ರವೇಶಿಸಲು ಅವಕಾಶ ಒದಗಿಸಲಾಗುತ್ತದೆ. ಭಕ್ತರು ತಮಗೆ ಕೋವಿಡ್‌–19 ಇಲ್ಲ ಎಂಬ ಬಗ್ಗೆ ಪ್ರಮಾಣಪತ್ರ ಹಾಜರುಪಡಿಸಬೇಕು. ಶಬರಿಮಲೆಗೆ ಬರುವುದಕ್ಕೆ 48 ಗಂಟೆ ಮೊದಲು ಈ ಪ್ರಮಾಣಪತ್ರ ಪಡೆದಿರಬೇಕು ಎಂದು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು