ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ | ಸಚಿನ್‌ ಪೈಲಟ್‌ ಯುಟರ್ನ್‌: ರಾಹುಲ್‌ ಭೇಟಿಗೆ ಸಮಯಕೋರಿದ ಬಂಡಾಯಗಾರ?

Last Updated 10 ಆಗಸ್ಟ್ 2020, 11:41 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಮತ್ತೊಂದು ತಿರುವು ಪಡೆದುಕೊಂಡಿದ್ದುಬಂಡಾಯ ನಾಯಕ ಸಚಿನ್‌ ಪೈಲಟ್‌ ಕಾಂಗ್ರೆಸ್‌ ವರಿಷ್ಠರ ಭೇಟಿಗೆ ಸಮಯ ಕೋರಿರುವುದು ಕಾಂಗ್ರೆಸ್ ಪಾಳೆಯದಲ್ಲಿ ಹೊಸ ಚೈತನ್ಯಮೂಡಿದೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಅಸಮಾಧಾನಗೊಂಡು 18 ಶಾಸಕರ ಜೊತೆ ಹೊಟೇಲ್‌ನಲ್ಲಿ ಬೀಡು ಬಿಟ್ಟಿರುವ ಯುವ ನೇತಾರ ಸಚಿನ್‌ ಪೈಲಟ್‌ ಮತ್ತೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ರಾಜಸ್ಥಾನ ಕಾಂಗ್ರೆಸ್‌ ಪಕ್ಷದ ಉಸ್ತುವಾರಿ ಅವಿನಾಶ್‌ ಪಾಂಡೇ ಮಾತನಾಡಿ, ಪಕ್ಷದಲ್ಲಿ 18 ಬಂಡಾಯ ಶಾಸಕರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ. ಆದರೆ ನಾವು ಹೈಕಮಾಂಡ್‌ ಮುಂದೆ ಯಾವುದೇ ಕಠಿಣ ಕ್ರಮದಪ್ರಸ್ತಾವನೆಗಳನ್ನು ಸಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ. ಅವಿನಾಶ್‌ ಪಾಂಡೇ ಅವರ ಮಾತನ್ನು ಸೂಕ್ಷ್ಮವಾಗಿ ಗಮನಿಸಿದರೆಸಚಿನ್‌ಮತ್ತೆ ಕಾಂಗ್ರೆಸ್‌ನತ್ತ ವಾಲಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಸಚಿನ್‌ ಪೈಲಟ್‌ ಸಂಪರ್ಕದಲ್ಲಿ ಕಾಂಗ್ರೆಸ್‌ ಹಿರಿಯ ನಾಯಕರಾದ ಪಿ.ಚಿದಂಬರಂ ಹಾಗೂ ಕೆ.ಸಿ.ವೇಣುಗೋಪಾಲ್‌ ಸಂಪರ್ಕದಲ್ಲಿದ್ದುಸಚಿನ್‌ ಮನಸ್ಸನ್ನು ಬದಲಿಸುವಲ್ಲಿ ಯಶಸ್ವಿಯಾಗಿದ್ದಾರೆಎಂದು ಹೇಳಲಾಗುತ್ತಿದ್ದೆ. ಸಚಿನ್‌ ಪೈಲಟ್‌ ಕಾಂಗ್ರೆಸ್‌ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ಖಚಿತಪಡಿಸಿವೆ ರಾಷ್ಟ್ರೀಯ ಸುದ್ದಿ ವಾಹಿನಿಗಳು ವರದಿ ಮಾಡಿವೆ.

ಮಾತುಕತೆ ಕುರಿತಂತೆ ಕೆ.ಸಿ.ವೇಣುಗೋಪಾಲ್‌ ಅವರು ರಾಹುಲ್ ಗಾಂಧಿಗೆ ವರದಿ ನೀಡಿದ್ದು ಸೋಮವಾರ ರಾತ್ರಿ ಭೇಟಿ ಮಾಡುವ ಸಾಧ್ಯತೆಗಳಿವೆ. ಕಾಂಗ್ರೆಸ್ ಪಕ್ಷದ ಜೊತೆಗೆ ಬಿ.ಎಸ್.ಪಿಯ ಆರುಶಾಸಕರುವಿಲೀನಗೊಂಡಿರುವುದನ್ನು ಪ್ರಶ್ನಿಸಿ ಬಿಜೆಪಿಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ ನಡೆಯಲಿದೆ. ಇದರ ವಿಚಾರಣೆಗೂ ಮುನ್ನ ರಾಜಿ ಸಂಧಾನಗಳುನಡೆಯುವ ಸಾಧ್ಯತೆಗಳಿವೆ.

ಆಗಸ್ಟ್‌ 14ರಂದ ವಿಧಾನಸಭೆ ಅಧಿವೇಶನ ಇರುವುದರಿಂದ ತ್ವರಿತವಾಗಿ ಸಚಿನ್‌ ಜೊತೆ ಮಾತುಕತೆ ನಡೆಸಿ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಚಿದಂಬರಂ ಅವರು ರಾಹುಲ್‌ ಗಾಂಧಿಗೆ ಸಲಹೆ ನೀಡಿದ್ದಾರೆ.

ಈಗಾಗಲೇ ಸಚಿನ್‌ ಪೈಲಟ್‌ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದು 18 ಶಾಸಕರ ಜೊತೆ ಅಜ್ಞಾತ ಸ್ಥಳದಲ್ಲಿ ಇದ್ದು ನಾವು ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎಂದು ಪದೇ ಪದೇ ಹೇಳುತ್ತಿದ್ದಾರೆ. ಇತ್ತ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯ ರಘುವೀರ್‌ ಮೀನಾ ಮಾತನಾಡಿ ವಿಶ್ವಾಸಮತದ ದಿನದಂದುರೆಬೆಲ್‌ ಶಾಸಕರು ಕಾಂಗ್ರೆಸ್‌ಗೆ ಮತ ನೀಡಿದರೆ ಅವರನ್ನು ಕ್ಷಮಿಸುತ್ತೇವೆ ಎಂದು ಹೇಳಿದ್ದಾರೆ.

ಇತ್ತ ರಾಜಸ್ಥಾನ ಬಿಜೆಪಿಯಲ್ಲಿ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ, ಪೈಲಟ್‌ ಬಣ ಕೂಡ ಬೆದರಿಕೆಯ ಬಿಗಿ ಪಟ್ಟನ್ನುಸಡಿಲಿಸಿದಂತೆಕಾಣುತ್ತಿದ್ದು ಪೈಲಟ್‌ ಮತ್ತೆ ಮಾತೃ ಪಕ್ಷಕ್ಕೆ ಮರಳುವುದು ಖಚಿತ ಎಂದು ರಾಜಕೀಯ ಚಿಂತಕರು ಅಭಿಪ್ರಾಯಪಟ್ಟಿದ್ದಾರೆ.

ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಇರುವುದರಿಂದ ಇಂದು ರಾತ್ರಿ ನಡೆಯುವ ರಾಜಕೀಯ ವಿದ್ಯಮಾನಗಳೇ ನಿರ್ಣಾಯಕವಾಗಿವೆ. ಈ ನಡುವೆ ಬಿಜೆಪಿ ಯಾವ ರಣತಂತ್ರ ಹೆಣೆದಿದೆ ಎಂಬುದನ್ನು ಕಾದುನೋಡಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT