ಶನಿವಾರ, ಸೆಪ್ಟೆಂಬರ್ 26, 2020
22 °C
ರಾಹುಲ್ ಗಾಂಧಿ, ಸಚಿನ್ ಪೈಲಟ್ ಮಾತುಕತೆ

ರಾಜಸ್ಥಾನ ರಾಜಕಾರಣಕ್ಕೆ ಹೊಸ ತಿರುವು: ಸಚಿನ್ ಪೈಲಟ್ ಪರ ಹೇಳಿಕೆ ನೀಡಿದ ಕಾಂಗ್ರೆಸ್

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರದ ಹಿತದೃಷ್ಟಿಯಿಂದ ಕೆಲಸ ಮಾಡಲಿದ್ದಾರೆ ಎಂದು ಸಚಿನ್ ಪೈಲಟ್ ಮತ್ತು ರಾಹುಲ್ ಗಾಂಧಿ ನಡುವಿನ ಸಭೆ ಬಳಿಕ ಕಾಂಗ್ರೆಸ್ ಸೋಮವಾರ ಹೇಳಿದೆ.

ಉಭಯ ನಾಯಕರು 'ನೇರ, ಮುಕ್ತ ಮತ್ತು ನಿರ್ಣಾಯಕ ಚರ್ಚೆ' ನಡೆಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

'ಸಚಿನ್ ಪೈಲಟ್ ಮತ್ತು ಅತೃಪ್ತ ಶಾಸಕರು ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಆ ಕುರಿತು ಸೂಕ್ತ ನಿರ್ಣಯಕ್ಕೆ ಬರಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನಿರ್ಧಾರದ ಮೇರೆಗೆ ಮೂರು ಸದಸ್ಯರ ಸಮಿತಿಯನ್ನು ರಚಿಸಲು ಎಐಸಿಸಿ ನಿರ್ಧರಿಸಿದೆ' ಎಂದು ಹೇಳಿಕೆ ತಿಳಿಸಿದೆ.

ಸಚಿನ್ ಪೈಲಟ್ ಅವರು ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರದ ಹಿತದೃಷ್ಟಿಯಿಂದ ಕೆಲಸ ಮಾಡಲು ಬದ್ಧರಾಗಿದ್ದಾರೆ ಎಂದೂ ಕೂಡ ಅದು ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು