ಮಂಗಳವಾರ, ಜೂನ್ 22, 2021
24 °C

ಮುಂಬೈ: ಸೇವೆಯಿಂದ ಪೊಲೀಸ್‌ ಅಧಿಕಾರಿ ಸಚಿನ್‌ ವಾಜೆ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ವಿವಾದಿತ ಪೊಲೀಸ್‌ ಅಧಿಕಾರಿ ಸಚಿನ್‌ ವಾಜೆ ಅವರನ್ನು ಸೇವೆಯಿಂದ ವಜಾಗೊಳಿಸಿ ಮುಂಬೈ ಪೊಲೀಸ್‌ ಕಮಿಷನರ್‌ ಹೇಮಂತ್‌ ನಾಗರಾಳೆ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಅವರು ಸಿಐಡಿಯ ಕ್ರೈಂ ಬ್ಯ್ರಾಂಚ್‌ಗೆ ಹೊಂದಿಕೊಂಡಿರುವ ಕ್ರೈಂ ಇಂಟೆಲಿಜೆನ್ಸ್‌ ಘಟಕದಲ್ಲಿ ಸಹಾಯಕ ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿದ್ದರು.

ಉದ್ಯಮಿ ಮುಕೇಶ್‌ ಅಂಬಾನಿ ನಿವಾಸದ ಬಳಿ ಸ್ಫೋಟಕಗಳು ತುಂಬಿದ್ದ ವಾಹನ ನಿಲ್ಲಿಸಿದ ಪ್ರಕರಣ ಹಾಗೂ ಈ ವಾಹನದ ಮಾಲೀಕ ಮನಸುಖ್‌ ಹಿರೇನ್‌ ಹತ್ಯೆ ಪ್ರಕರಣದಲ್ಲಿ ವಾಜೆ ಪ್ರಮುಖ ಆರೋಪಿಯಾಗಿದ್ದು, ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು