ಬುಧವಾರ, ಆಗಸ್ಟ್ 10, 2022
21 °C

ಪಂಜಾಬ್‌ ವಿಧಾನಸಭಾ ಚುನಾವಣೆ: ಎಸ್‌ಎಡಿ– ಬಿಎಸ್‌ಪಿ ಮೈತ್ರಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚಂಡೀಗಡ: ಮುಂದಿನ ವರ್ಷ ಪಂಜಾಬ್‌ ವಿಧಾನಸಭೆಗೆ ನಡೆಯಲಿರುವ ಚುನಾವಣೆಗಾಗಿ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮೈತ್ರಿ ಮಾಡಿಕೊಂಡಿವೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಸ್‌ಎಡಿ ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಅವರು ,‘ ಪಂಜಾಬ್‌ ರಾಜಕೀಯದಲ್ಲಿ ಇದೊಂದು ಐತಿಹಾಸಿಕ ದಿನ. ಇದು ಪಂಜಾಬ್‌ ರಾಜಕೀಯಕ್ಕೆ ಹೊಸ ತಿರುವು ನೀಡಲಿದೆ’ ಎಂದು ಹೇಳಿದರು.

ಈ ವೇಳೆ ಬಿಎಸ್‌ಪಿ ಪ್ರಧಾನ ಕಾರ್ಯದರ್ಶಿ ಸತೀಶ್‌ ಚಂದ್ರ ಮಿಶ್ರಾ ಉಪಸ್ಥಿತರಿದ್ದರು.

‘ಮುಂದಿನ ವರ್ಷ ನಡೆಯುವ ಪಂಜಾಬ್‌ ವಿಧಾನಸಭಾ ಚುನಾವಣೆ ಮತ್ತು ಇತರೆ ಚುನಾವಣೆಗಳನ್ನು ಎಸ್‌ಎಡಿ ಮತ್ತು ಬಿಎಸ್‌ಪಿ ಜಂಟಿಯಾಗಿ ಎದುರಿಸಲಿವೆ. ವಿಧಾನಸಭೆಯ 117 ಸ್ಥಾನಗಳ ಪೈಕಿ ಮಾಯಾವತಿ ನೇತೃತ್ವದ ಬಿಎಸ್‌ಪಿ 20 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ’ ಎಂದು ಅವರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು