ಭಾನುವಾರ, ನವೆಂಬರ್ 1, 2020
20 °C

ಕೃಷಿ ಮಸೂದೆ: ಇಂದು ರಾಷ್ಟ್ರಪತಿಗಳ ಭೇಟಿಯಾಗಲಿದೆ ಶಿರೋಮಣಿ ಅಕಾಲಿ ದಳ ನಿಯೋಗ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಸಂಸತ್‌ನಲ್ಲಿ ಕೃಷಿ ಮಸೂದೆಗಳ ಅಂಗೀಕಾರಕ್ಕೆ ಸಂಬಂಧಿಸಿ ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ಸಂಸದ ಸುಖ್‌ಬೀರ್ ಸಿಂಗ್ ಬಾದಲ್ ನೇತೃತ್ವದ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಇಂದು ಸಂಜೆ 4.30ಕ್ಕೆ ಭೇಟಿಯಾಗಲಿದೆ.

ಕೃಷಿ ಮಸೂದೆಗಳಿಗೆ ಅಕಾಲಿ ದಳ ಹಿಂದಿನಿಂದಲೂ ತೀವ್ರ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದೆ. ಪಂಜಾಬ್‌ನಲ್ಲಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆಗಳೂ ನಡೆದಿವೆ.

ರೈತರ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ ಮತ್ತು ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕುರಿತಂತೆ ರೈತರ ಜತೆ (ಸಬಲೀಕರಣ ಮತ್ತು ರಕ್ಷಣೆ) ಒಪ್ಪಂದ ಮಸೂದೆಗಳಿಗೆ ಭಾರಿ ಗದ್ದಲ, ಪ್ರತಿಭಟನೆ ಮತ್ತು ವಿರೋಧದ ನಡುವೆಯೇ ಭಾನುವಾರ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಲಾಗಿತ್ತು.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು