ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಾರೋಗ್ಯ | ಪಂಜಾಬ್‌ ಮಾಜಿ ಸಿಎಂ ಪ್ರಕಾಶ್‌ ಸಿಂಗ್ ಬಾದಲ್‌ ಆಸ್ಪತ್ರೆಗೆ ದಾಖಲು

Last Updated 4 ಸೆಪ್ಟೆಂಬರ್ 2022, 11:18 IST
ಅಕ್ಷರ ಗಾತ್ರ

ಚಂಡೀಗಡ: ಶಿರೋಮಣಿ ಅಕಾಲಿ ದಳದ ವರಿಷ್ಠ ಪ್ರಕಾಶ್‌ ಸಿಂಗ್‌ ಬಾದಲ್ (94) ಅವರಿಗೆ ಜ್ವರ ಕಾಣಿಸಿಕೊಂಡ ಕಾರಣ ಅವರನ್ನು ಇಲ್ಲಿನ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗೆ (ಪಿಜಿಐಎಂಇಆರ್‌) ಶನಿವಾರ ದಾಖಲಿಸಲಾಗಿದೆ.

‘ಪಂಜಾಬ್‌ ಮಾಜಿ ಮುಖ್ಯಮಂತ್ರಿ ಬಾದಲ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ’ ಎಂದು ಪಕ್ಷದ ನಾಯಕ ದಲ್ಜಿತ್‌ ಸಿಂಗ್‌ ಚೀಮಾ ಭಾನುವಾರ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಜೂನ್‌ನಲ್ಲಿ ಶ್ವಾಸನಾಳದ ಅಸ್ತಮಾ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊಹಾಲಿಯ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT