ಶುಕ್ರವಾರ, ಅಕ್ಟೋಬರ್ 23, 2020
24 °C

ಕೃಷಿ ಮಸೂದೆ: ರಸ್ತೆ ತಡೆದು ಪ್ರತಿಭಟನೆಗೆ ಶಿರೋಮಣಿ ಅಕಾಲಿ ದಳ ಕರೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚಂಡೀಗಡ: ಕೃಷಿ ಮಸೂದೆ ವಿರೋಧಿಸಿ ಇದೇ 25 ರಂದು ಪಂಜಾಬ್‌ನಲ್ಲಿ ರಸ್ತೆಗಳಲ್ಲಿ ಸಂಚಾರ ತಡೆದು ಪ್ರತಿಭಟನೆ ನಡೆಸುವುದಾಗಿ ಶಿರೋಮಣಿ ಅಕಾಲಿ ದಳ ಮಂಗಳವಾರ ಹೇಳಿದೆ.

ರೈತ ವಿರೋಧಿ ಮಸೂದೆಗಳ ಅಂಗೀಕಾರವನ್ನು ವಿರೋಧಿಸಿ ಶುಕ್ರವಾರ ಪಂಜಾಬ್‌ನಲ್ಲಿ ‘ಚಕ್ಕಾ ಜಾಮ್’ (ರಸ್ತೆ ದಿಗ್ಬಂಧನ) ನಡೆಸಲು ನಿರ್ಧರಿಸಲಾಗಿದೆ. ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರು, ರೈತರು ಸೇರಿದಂತೆ ಇತರರು ಅಂದು ಬೆಳಿಗ್ಗೆ 11 ಗಂಟೆಯಿಂದ ಮೂರು ಗಂಟೆಗಳ ಕಾಲ ರಸ್ತೆ ತಡೆದು ಶಾಂತಿಯುತವಾಗಿ ಪ್ರತಿಭಟಿಸಲಿದ್ದಾರೆ ಎಂದು ಎಸ್‌ಎಡಿ ನಾಯಕ ದಲ್ಜಿತ್ ಸಿಂಗ್ ಚೀಮ ತಿಳಿಸಿದರು. 

ಇದೇ 26ರಿಂದ ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಅವರು ನಾಲ್ಕು ದಿನಗಳ ಜಾಗೃತಿ ಕಾರ್ಯಕ್ರಮ ನಡೆಸಲಿದ್ದಾರೆ. ಈ ವೇಳೆ ಅವರು ಕೃಷಿ ಮಸೂದೆಯಿಂದ ರೈತರ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈಗಾಗಲೇ ಕೃಷಿ ಮಸೂದೆಯನ್ನು ವಿರೋಧಿಸಿ ಪಂಜಾಬ್‌ನ 30 ರೈತ ಸಂಘಟನೆಗಳು ರಾಜ್ಯದಲ್ಲಿ ಸಂಪೂರ್ಣ ಮುಷ್ಕರಕ್ಕೆ ಕರೆ ನೀಡಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು