ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ಸಾಕಿನಾಕ ಅತ್ಯಾಚಾರ ಪ್ರಕರಣ: ಅಪರಾಧಿಗೆ ಮರಣದಂಡನೆ ಶಿಕ್ಷೆ

Last Updated 2 ಜೂನ್ 2022, 15:16 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಸಾಕಿನಾಕ ಪ್ರದೇಶದಲ್ಲಿ 2021ರ ಸೆಪ್ಟೆಂಬರ್‌ನಲ್ಲಿ ನಡೆದಿದ್ದ ಮಹಿಳೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿಗೆ ಮುಂಬೈ ನ್ಯಾಯಾಲಯ ಮರಣದಂಡನೆ ಶಿಕ್ಷೆ ಪ್ರಕಟಿಸಿದೆ.

ರಸ್ತೆ ಬದಿ ನಿಲ್ಲಿಸಲಾಗಿದ್ದ ಟೆಂಪೊ ಒಂದರಲ್ಲಿ 34 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ 45 ವರ್ಷದ ವ್ಯಕ್ತಿ, ನಂತರ ಕ್ರೂರವಾಗಿ ಹತ್ಯೆ ಮಾಡಿದ್ದ.

2012ರ ದೆಹಲಿ ಗ್ಯಾಂಗ್‌ರೇಪ್ ಘಟನೆಯನ್ನು ನೆನಪಿಸುವಂತಿದ್ದ ಈ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಇದೊಂದು ಅಪರೂಪದ ಪ್ರಕರಣ ಎಂದಿರುವ ನ್ಯಾಯಾಧೀಶರು, ಅಪರಾಧಿಗೆ ಮರಣದಂಡನೆ ವಿಧಿಸಿದ್ದಾರೆ.

ಮಹಿಳೆಯನ್ನು ಟೆಂಪೊದಲ್ಲಿ ಕೂಡಿ ಹಾಕಿ ಅತ್ಯಾಚಾರ ನಡೆಸಿದ್ದ ಆರೋಪಿ, ಬಳಿಕ ಆಕೆಯ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್‌ ಹಾಕಿ ಕ್ರೂರವಾಗಿ ಹಿಂಸಿಸಿದ್ದ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT