ಬುಧವಾರ, ಅಕ್ಟೋಬರ್ 28, 2020
18 °C
ಪ್ರಚೋದನಕಾರಿ ಭಾಷಣದ ಆರೋಪ: ದೆಹಲಿ ಪೊಲೀಸರು

ಸಿಎಎ ಪ್ರತಿಭಟನೆ: ಸಲ್ಮಾನ್ ಖುರ್ಷಿದ್ ಮತ್ತಿತರರ ವಿರುದ್ಧ ಆರೋಪ ಪಟ್ಟಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಫೆಬ್ರುವರಿ ತಿಂಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿರಿಯ ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್‌, ಸಿಪಿಎಂ ನಾಯಕಿ ಬೃಂದಾ ಕಾರಟ್‌ ಮತ್ತು ಉದಿತ್‌ ರಾಜ್ ಸೇರಿದಂತೆ ವಿವಿಧ ರಾಜಕೀಯ ನಾಯಕರು ಪ್ರಚೋದನಕಾರಿ ಭಾಷಣ ಮಾಡಿರುವುದಾಗಿ ದೆಹಲಿ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾರೆ.

ಪೊಲೀಸರು ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಕಾಂಗ್ರೆಸ್‌ನ ಮಾಜಿ ಕೌನ್ಸಿಲರ್ ಇಶ್ರತ್ ಜಹಾನ್ ಅವರ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ.

‘ದೀರ್ಘಕಾಲ ಪ್ರತಿಭಟನೆಯನ್ನು ಮುಂದುವರಿಸಲು ಸಲ್ಮಾನ್ ಖುರ್ಷಿದ್, ರಾಹುಲ್ ರಾಯ್ (ಸಿನಿಮಾ ನಿರ್ಮಾಪಕ), ಭೀಮ್ ಆರ್ಮಿ ಸದಸ್ಯರಾದ ಹಿಮಾಂಶು, ಚಂದನ್‌ಕುಮಾರ್ ಅವರಂಥ ಕೆಲವು ವ್ಯಕ್ತಿಗಳು ನನಗೆ ಮತ್ತು ಖಾಲಿದ್ ಸೈಫಿಗೆ ಸೂಚಿಸಿದ್ದರು. ಅವರು ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣಗಳು ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದರು’ ಎಂದು ಇಶ್ರತ್‌ ಜಹಾನ್ ಹೇಳಿಕೆ ನೀಡಿದ್ದಾರೆ. ಇವರ ಎಲ್ಲ ಹೇಳಿಕೆಗಳನ್ನೂ ಪೊಲೀಸರು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು