ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ತ್ರೀಯರು 16ನೇ ವಯಸ್ಸಿಗೇ ವಿವಾಹವಾದರೆ ತಪ್ಪಿಲ್ಲ: ಎಸ್‌ಪಿ ಸಂಸದ ಎಸ್.ಟಿ.ಹಸನ್

Last Updated 17 ಡಿಸೆಂಬರ್ 2021, 13:50 IST
ಅಕ್ಷರ ಗಾತ್ರ

ನವದೆಹಲಿ: ಸ್ತ್ರೀಯರು 16ನೇ ವಯಸ್ಸಿನಲ್ಲೇ ಮದುವೆಯಾಗುವುದರಲ್ಲಿ ತಪ್ಪಿಲ್ಲ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಎಸ್.ಟಿ.ಹಸನ್ ಹೇಳಿದ್ದಾರೆ.

ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 18 ವರ್ಷದಿಂದ 21 ವರ್ಷಕ್ಕೆ ಏರಿಸುವುದಕ್ಕಾಗಿ ಕಾಯ್ದೆ ರೂಪಿಸಲು ಕೇಂದ್ರ ಸರ್ಕಾರ ಮುಂದಾಗಿರುವ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಕೇಂದ್ರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಹುಡುಗಿಯರು ವಯಸ್ಸಿಗೆ ಬಂದಾಗ ಮದುವೆಯಾಗಬೇಕು. 16ನೇ ವಯಸ್ಸಿನಲ್ಲಿ ವಿವಾಹವಾಗುವುದು ತಪ್ಪಲ್ಲ. 18ನೇ ವಯಸ್ಸಿನಲ್ಲಿ ಸ್ತ್ರೀಯರು ಮತ ಚಲಾಯಿಸಬಹುದಾದರೆ ಮದುವೆ ಯಾಕಾಗಬಾರದು ಎಂದು ಅವರು ಪ್ರಶ್ನಿಸಿರುವ ವಿಡಿಯೊವನ್ನು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT