ನವದೆಹಲಿ: ಮುಲಾಯಂ ಸಿಂಗ್ ನೇತೃತ್ವದ ಸಮಾಜವಾದಿ ಪಕ್ಷವು ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಲು ನಿರ್ಧರಿಸಿದ್ದು, ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾದಳವನ್ನು (ಆರ್‌ಜೆಡಿ) ಬೆಂಬಲಿಸಲು ನಿರ್ಧರಿಸಿದೆ.

ಈ ಕುರಿತು ಸೋಮವಾರ ಟ್ವೀಟ್ ಮಾಡಿರುವ ಸಮಾಜವಾದಿ ಪಕ್ಷ, 'ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಯಾವುದೇ ಮೈತ್ರಿ ಇಲ್ಲದೇ, ರಾಷ್ಟ್ರೀಯ ಜನತಾದಳದ ಅಭ್ಯರ್ಥಿಗಳಿಗೆ ಬೆಂಬಲ ನೀಡಲು ನಿರ್ಧರಿಸಿದೆ,’ ಎಂದು ತಿಳಿಸಿದೆ.

2015 ರಲ್ಲಿ ಮಹಾಘಟಬಂಧನದಲ್ಲಿದ್ದ ಎಸ್‌ಪಿಗೆ 243 ಕ್ಷೇತ್ರಗಳ ಪೈಕಿ ಕೇವಲ ಐದು ಸೀಟುಗಳನ್ನು ಮಾತ್ರ ಬಿಟ್ಟುಕೊಡಲಾಗಿತ್ತು. ಇದರಿಂದ ಆಕ್ರೋಶಗೊಂಡಿದ್ದ ಎಸ್‌ಪಿ ಮೈತ್ರಿಯಿಂದ ಹೊರ ಬಂದು ಎನ್‌ಸಿಪಿ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಗೆ ಸ್ಪರ್ಧೆ ಮಾಡಿತು. ಆದರೆ, ಎರಡೂ ಪಕ್ಷಗಳಿಗೂ ಯಾವುದೇ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ.

ಇದಕ್ಕೂ ಮುನ್ನ 2010ರ ಬಿಹಾರ ಚುನಾವಣೆಗಳಲ್ಲಿ ಎಸ್‌ಪಿ ಸಾಧನೆ ಕೂಡ ಕಳಪೆಯಾಗಿತ್ತು. ಒಟ್ಟು 243 ಕ್ಷೇತ್ರಗಳ ಪೈಕಿ 146 ಸ್ಥಾನಗಳಿಗೆ ಸ್ಪರ್ಧಿಸಿದ್ದ ಎಸ್‌ಪಿ ಯಾವುದೇ ಸ್ಥಾನ ಗೆಲ್ಲುವಲ್ಲಿ ವಿಫಲವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.