ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಲಿಂಗಿ ವಿವಾಹಕ್ಕೆ ಕಾನೂನು ಮಾನ್ಯತೆ: ಸೋಮವಾರ ಅರ್ಜಿಗಳ ವಿಚಾರಣೆ

Last Updated 11 ಮಾರ್ಚ್ 2023, 15:59 IST
ಅಕ್ಷರ ಗಾತ್ರ

ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರಕ್ಕೆ ನಿಗದಿಪಡಿಸಿದೆ.

ಸೋಮವಾರ ವಿಚಾರಣೆಗಾಗಿ ನಿಗದಿಯಾಗಿರುವ ಅರ್ಜಿಗಳ ಪಟ್ಟಿಯನ್ನು ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್‌. ನರಸಿಂಹನ್‌ ಮತ್ತು ಜೆ.ಬಿ. ಪಾರ್ದಿವಾಲ ಅವರನ್ನು ಒಳಗೊಂಡ ಪೀಠವು ಸಲಿಂಗ ವಿವಾಹದ ಕುರಿತು ಸಲ್ಲಿಕೆ ಆಗಿರುವ ಅರ್ಜಿಗಳ ವಿಚಾರಣೆ ನಡೆಸಲಿದೆ.

ಅರ್ಜಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪರ ವಕೀಲರು ಮತ್ತು ಅರ್ಜಿದಾರರ ಪರ ವಕೀಲರು ಒಟ್ಟಾಗಿ ತಯಾರಿಸಿದ ಪಟ್ಟಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗುವುದು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT