ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಸಿಬಿಯ ಮಾಜಿ ಅಧಿಕಾರಿ ಸಮೀರ್ ವಿರುದ್ಧ ಕ್ರಮಕ್ಕೆ ಕೇಂದ್ರ ಸೂಚನೆ

Last Updated 27 ಮೇ 2022, 12:30 IST
ಅಕ್ಷರ ಗಾತ್ರ

ನವದೆಹಲಿ:‘ಐಷಾರಾಮಿ ಹಡಗಿನಲ್ಲಿ ಡ್ರಗ್ಸ್‌’ ಪ್ರಕರಣದಲ್ಲಿ ಶಾರುಖ್‌ ಖಾನ್‌ಪುತ್ರ ಆರ್ಯನ್‌ ಖಾನ್‌ ಅವರನ್ನು ಬಂಧಿಸಿದ್ದ ಮಾದಕ ದ್ರವ್ಯ ನಿಯಂತ್ರಣ ದಳ(ಎನ್‌ಸಿಬಿ)ದ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಣಕಾಸು ಸಚಿವಾಲಯಕ್ಕೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಆರ್ಯನ್ ಖಾನ್ ಪ್ರಕರಣದಲ್ಲಿ ನಿರ್ಲಕ್ಷ್ಯದ ಆರೋಪ ಎದುರಿಸುತ್ತಿರುವ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿರುವ ಸರ್ಕಾರ, ನಕಲಿ ಜಾತಿ ಪ್ರಮಾಣ ಸಲ್ಲಿಕೆ ಆರೋಪ ಸಂಬಂಧ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಹೇಳಿದೆ.

ವಾಂಖೆಡೆ ಅವರು ಭಾರತೀಯ ಕಂದಾಯ ಸೇವೆಗಳ ಅಧಿಕಾರಿಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲು ಹಣಕಾಸು ಸಚಿವಾಲಯವು ನೋಡಲ್ ಪ್ರಾಧಿಕಾರವಾಗಿದೆ.

‘ಐಷಾರಾಮಿ ಹಡಗಿನಲ್ಲಿ ಡ್ರಗ್ಸ್‌’ ಪ್ರಕರಣದಲ್ಲಿ ಬಾಲಿವುಡ್ ಸೂಪರ್‌ಸ್ಟಾರ್‌ ಶಾರುಖ್‌ ಖಾನ್‌ಪುತ್ರ ಆರ್ಯನ್‌ ಖಾನ್‌ ಅವರನ್ನು ಆರೋಪ ಮುಕ್ತಗೊಳಿಸಿದ ಬೆನ್ನಲ್ಲೇ, ಕೇಂದ್ರ ಸರ್ಕಾರದ ಈ ತೀರ್ಮಾನ ಹೊರಬಿದ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT