ಗುರುವಾರ , ಸೆಪ್ಟೆಂಬರ್ 23, 2021
26 °C

ನಿಫಾ: ಮೂಲ ಇನ್ನೂ ಪತ್ತೆಯಾಗಿಲ್ಲ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರ: ‘ನಿಫಾ ವೈರಸ್‌ ಸೋಂಕಿನಿಂದ ಕಳೆದ ವಾರ ಮೃತಪಟ್ಟ ಬಾಲಕನ ಸಂಪರ್ಕಕ್ಕೆ ಬಂದ ನಾಲ್ವರ ಮಾದರಿಗಳು ನೆಗೆಟಿವ್‌ ಎಂದು ದೃಢಪಟ್ಟಿವೆ. ಆದರೆ, ಮೂಲ ಇನ್ನೂ ಪತ್ತೆಯಾಗಿಲ್ಲ’ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಭಾನುವಾರ ತಿಳಿಸಿದ್ದಾರೆ.

‘ನಾಲ್ಕ ಮಾದರಿಗಳನ್ನು ಮತ್ತೊಮ್ಮೆ ಪರೀಕ್ಷಿಸಲಾಯಿತು. ಎಲ್ಲರದ್ದೂ ನೆಗೆಟಿವ್‌ ಫಲಿತಾಂಶ ದೊರೆತಿದೆ. ಸಮೀಕ್ಷೆ ಕಾರ್ಯ ಮುಂದುವರಿದಿದೆ. ಮಾದರಿಗಳ ಪರೀಕ್ಷೆಯೂ ಮುಂದುವರಿದಿವೆ’ ಎಂದು ಅವರು ತಿಳಿಸಿದ್ದಾರೆ.

‘ಸೋಂಕಿನ ಮೂಲ ಪತ್ತೆ ಮಾಡುವುದು ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ. ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯ ತಂಡ ವಿವಿಧ ಪ್ರದೇಶಗಳಿಂದ ಮಾದರಿಗಳನ್ನು ಸಂಗ್ರಹಿಸುತ್ತಿದ್ದಾರೆ. ಅತ್ಯಂತ ಅಪಾಯದ ಸಂಪರ್ಕದಲ್ಲಿದ್ದವರು ಎಂದು ಗುರುತಿಸಲಾದವರನ್ನು ಕೋಯಿಕ್ಕೊಡ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು