ಶನಿವಾರ, ಡಿಸೆಂಬರ್ 3, 2022
27 °C

ಈಡೇರದ ಭರವಸೆ: 26ರಂದು ರಾಜಭವನ ಚಲೊ– ಎಸ್‌ಕೆಎಂ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರ ಸರ್ಕಾರವು ರೈತರಿಗೆ ನೀಡಿದ್ದ ಭರವಸೆಯನ್ನು ಈಡೇರಿಸದ ಕಾರಣ ನವೆಂಬರ್‌ 26ರಂದು ದೇಶದಾದ್ಯಂತ ರಾಜಭವನ ಚಲೊ ನಡೆಸುವುದಾಗಿ ಸಂಯುಕ್ತ ಕಿಸಾನ್‌ ಮೋರ್ಚಾ (ಎಸ್‌ಕೆಎಂ) ಗುರುವಾರ ಘೋಷಿಸಿದೆ.

ನವೆಂಬರ್‌ 19 ರಂದು ‘ವಿಜಯ ದಿವಸ’ವಾಗಿ ಆಚರಿಸಲಾಗುವುದು. ಡಿಸೆಂಬರ್‌ 1ರಿಂದ 11ರವರೆಗೆ ಎಲ್ಲಾ ಪಕ್ಷಗಳ ರಾಜ್ಯಸಭಾ, ಲೋಕಸಭಾ ಸದಸ್ಯರ ಕಚೇರಿಗಳಿಗೆ ಜಾಥಾ ನಡೆಸಲಾಗುವುದು ಎಂದು ಎಸ್‌ಕೆಎಂ ಮುಖಂಡ ದರ್ಶನ್‌ ಪಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲು ಡಿಸೆಂಬರ್‌ 8ರಂದು ಸಭೆ ಕರೆಯಲಾಗಿದೆ ಎಂದೂ ಹೇಳಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ 9ರಂದು ಪ್ರತಿಭಟನೆ ಹಿಂತೆಗೆದುಕೊಳ್ಳುವ ಮುನ್ನ ಲಿಖಿತ ರೂಪದಲ್ಲಿ ನೀಡಿದ್ದ ಭರವಸೆಗಳನ್ನು ಕೇಂದ್ರ ಸರ್ಕಾರವು ಈಡೇರಿಸಿಲ್ಲ ಎಂದು ಎಸ್‌ಕೆಎಂ ಆರೋಪಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.