ಬುಧವಾರ, ಮೇ 18, 2022
29 °C

ರೈತರ ಹೋರಾಟಕ್ಕೆ ಬೆಂಬಲ: ರಾಕೇಶ್ ಟಿಕಾಯತ್ ಭೇಟಿಯಾದ ಸಂಜಯ್ ರಾವುತ್‌

ಪಿಟಿಐ Updated:

ಅಕ್ಷರ ಗಾತ್ರ : | |

ಗಾಜಿಯಾಬಾದ್‌: ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ದೆಹಲಿ – ಉತ್ತರ ಪ್ರದೇಶ ರಾಜ್ಯದ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ಶಿವಸೇನಾ ಸಂಸದ ಸಂಜಯ್ ರಾವುತ್‌ ಮಂಗಳವಾರ ಭೇಟಿ ಮಾಡಿದರು.

ಪ್ರತಿಭಟನಾ ಸ್ಥಳದಲ್ಲಿ ಕೇಂದ್ರ ಸರ್ಕಾರ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸುತ್ತಿರುವ ಹೊತ್ತಲ್ಲಿ, ಸಂಜಯ್ ರಾವುತ್ ಪ್ರತಿಭಟನಾ ಸ್ಥಳ ಗಾಜಿಪುರ ತಲುಪಿ, ಪ್ರತಿಭಟನಾ ನಿರತ ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಇತರೆ ರೈತರ ಮುಖಂಡರನ್ನು ಭೇಟಿಯಾದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜ.26ರ ಘಟನೆ ನಡೆದ ನಂತರ, ಸರ್ಕಾರ ರೈತ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಿದೆ. ಈ ಸಂದರ್ಭದಲ್ಲಿ ಪ್ರತಿಭಟನಾ ನಿರತ ರೈತರೊಟ್ಟಿಗೆ ನಿಲ್ಲಬೇಕಾದದ್ದು ನಮ್ಮ ಕರ್ತವ್ಯವಾಗಿದೆ. ಇಡೀ ಮಹಾರಾಷ್ಟ್ರ ರೈತರ ಹೋರಾಟಕ್ಕೆ ಬೆಂಬಲ ನೀಡುತ್ತಿದೆ’ ಎಂದು ತಿಳಿಸಿದರು.

ಇದನ್ನೂ ಓದಿ... ಬಂಧಿತರನ್ನು ಬಿಡುಗಡೆ ಮಾಡುವವರೆಗೆ ಮಾತುಕತೆ ಸಾಧ್ಯವಿಲ್ಲ: ಕಿಸಾನ್ ಮೋರ್ಚಾ ಪಟ್ಟು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು