ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ಗೃಹ ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪ ಮುಗಿದ ಅಧ್ಯಾಯ: ರಾವತ್

ನವದೆಹಲಿಯಲ್ಲಿ ಶಿವಸೇನಾ ಮುಖಂಡ ಸ್ಪಷ್ಟನೆ
Last Updated 25 ಮಾರ್ಚ್ 2021, 8:22 IST
ಅಕ್ಷರ ಗಾತ್ರ

ಮುಂಬೈ: ‘ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್‌ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಮಾಡಿರುವ ಭ್ರಷ್ಟಾಚಾರದ ಆರೋಪ ಮುಗಿದ ಅಧ್ಯಾಯ. ಇದರಿಂದ ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ’ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್‌ ಹೇಳಿದರು.

ನವದೆಹಲಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಮ್ಮ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪದ ಬಗ್ಗೆ ಯಾವುದೇ ರೀತಿಯ ತನಿಖೆ ನಡೆಸುವುದನ್ನು ಸ್ವಾಗತಿಸುವುದಾಗಿ ಅನಿಲ್‌ ದೇಶಮುಖ್ ಹೇಳಿದ್ದಾರೆ ಎಂದು ತಿಳಿಸಿದರು.

‘ಪತ್ರದಲ್ಲಿ ಸಿಂಗ್ ಅವರು ಮಾಡಿರುವ ಆರೋಪಗಳ ಬಗ್ಗೆ ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಬೇಕು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಅನಿಲ್ ದೇಶಮುಖ್ ಅಭಿಪ್ರಾಯಪಟ್ಟಿದ್ದಾರೆ. ಅದರಂತೆ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿದೆ. ದೇಶಮುಖ್ ಅವರನ್ನು ಸಚಿವ ಸ್ಥಾನದಿಂದ ತೆಗೆದುಹಾಕುವ ಅಗತ್ಯವಿಲ್ಲ‘ ಎಂದು ಅವರು ಹೇಳಿದರು.

ಈ ಬೆಳವಣಿಗೆಗಳನ್ನು ಗಮನಿಸಿದರೆ, ರಾಜ್ಯದಲ್ಲಿನ ವಾತಾವರಣವನ್ನು ಹಾಳು ಮಾಡಲು ಯಾರೋ ಯತ್ನಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ ಎಂದು ರಾವತ್ ಹೇಳಿದರು.

ಪೊಲೀಸ್ ಅಧಿಕಾರಿಗಳು ಬಾರ್ ಮತ್ತು ಹೋಟೆಲ್‌ಗಳಿಂದ ತಿಂಗಳಿಗೆ ₹100 ಕೋಟಿ ಹಣ ಸಂಗ್ರಹಿಸಲು ಗೃಹಸಚಿವರು ಹೇಳಿದ್ದಾರೆ ಎಂದು ನಿವೃತ್ತ ಪೊಲೀಸ್ ಆಯುಕ್ತ ಪರಮ್‌ ಬೀರ್ ಸಿಂಗ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದು ಆರೋಪಿಸಿದ್ದರು. ಇದನ್ನು ಗೃಹ ಸಚಿವರು ನಿರಾಕರಿಸಿದ್ದರು.

ವಿಧಾನಪರಿಷತ್ತಿಗೆ ನಾಮ ನಿರ್ದೇಶನ ಮಾಡಲು ರಾಜ್ಯ ಸಚಿವ ಸಂಪುಟ 12 ಮಂದಿಯ ಹೆಸರುಗಳನ್ನು ಶಿಫಾರಸು ಮಾಡಿದ್ದರೂ, ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರು ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ರಾವತ್ ಟೀಕಿಸಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT