ಶನಿವಾರ, ಮೇ 15, 2021
29 °C

ಶಾರದಾ ಚಿಟ್‌ಫಂಡ್‌ ಹಗರಣ: ಸೆಬಿ ಅಧಿಕಾರಿಗಳ ಕಚೇರಿಗಳಲ್ಲಿ ಸಿಬಿಐ ಶೋಧ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಶಾರದಾ ಚಿಟ್‌ಫಂಡ್‌ ಹಗರಣಕ್ಕೆ ಸಂಬಂಧಿಸಿದಂತೆ ಸೆಬಿಯ ಮೂವರು ಅಧಿಕಾರಿಗಳ ಕಚೇರಿಗಳಲ್ಲಿ ಸಿಬಿಐ ಸೋಮವಾರ ಶೋಧ ನಡೆಸಿತು.

‘ಮೂವರು ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಲ್ಲ’ ಎಂದು ಅಧಿಕಾರಿಗಳು ತಿಳಿಸಿದರು.

ಪಶ್ಚಿಮ ಬಂಗಾಳದ ಶಾರದಾ ಗ್ರೂಪ್ಸ್‌ ವಿರು‌ದ್ಧ ಅನೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಮ್ಮನ್ನು ವಂಚಿಸಿದ್ದಾರೆ ಎಂದು ಸಾವಿರಾರು ಹೂಡಿಕೆದಾರರು ಆರೋಪಿಸಿದ್ದಾರೆ.

ಈ ಹಿಂದೆ ಸುಪ್ರೀಂಕೋರ್ಟ್‌, ಶಾರದಾ ಚಿಟ್‌ಫಂಡ್‌ ಹಗರಣವನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಅಲ್ಲದೆ ಸಿಬಿಐಗೆ ಬೇಕಾದ ಎಲ್ಲಾ ನೆರವು ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು