ಮಂಗಳವಾರ, ಮಾರ್ಚ್ 9, 2021
31 °C

ವಿ.ಕೆ. ಶಶಿಕಲಾ ಬಿಡುಗಡೆ ಇಂದು?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಡಿ ಶಿಕ್ಷೆಗೆ ಗುರಿಯಾಗಿದ್ದ ಎಐಎಡಿಎಂಕೆ ಪಕ್ಷದ ನಾಯಕಿ ವಿ.ಕೆ. ಶಶಿಕಲಾ ಹಾಗೂ ಇತರರು, ನಗರದ ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ಬಿಡುಗಡೆಯಾಗುವ ಸಾಧ್ಯತೆ ಇದೆ.

ಕೊರೊನಾ ಸೋಂಕು ತಗುಲಿರುವುದರಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಶಿಕಲಾ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿದ್ದ ಕಾರಾಗೃಹ ಅಧಿಕಾರಿಗಳು, ಶಶಿಕಲಾ ಸಹಿ ಪಡೆದು ಬಿಡುಗಡೆಗೆ ಬೇಕಾದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿರುವುದಾಗಿ ಗೊತ್ತಾಗಿದೆ.

‘ಪಿಪಿಇ ಕಿಟ್ ಧರಿಸಿ ಆಸ್ಪತ್ರೆಯೊಳಗೆ ಹೋಗಿ ಶಶಿಕಲಾ ಸಹಿ ಪಡೆದಿರುವ ಕಾರಾಗೃಹದ ಸಿಬ್ಬಂದಿ, ಬಿಡುಗಡೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಆಸ್ಪತ್ರೆಯಿಂದಲೇ ಶಶಿಕಲಾ ಬಿಡುಗಡೆ ಮಾಡಲು ಚಿಂತನೆ ನಡೆಸಲಾಗಿದ್ದು, ಆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದು ಬಾಕಿ ಇದೆ’ ಎಂದು ಕಾರಾಗೃಹದ  ಮೂಲಗಳು ಹೇಳಿವೆ.

‘ಶಶಿಕಲಾ ಆರೋಗ್ಯದ ಬಗ್ಗೆ ವೈದ್ಯರಿಂದಲೂ ಮಾಹಿತಿ ಪಡೆಯಲಾಗಿದೆ. ಬಿಡುಗಡೆಯಾದ ಕೂಡಲೇ ತಮಿಳುನಾಡಿನ ಆಸ್ಪತ್ರೆಗೆ ಸ್ಥಳಾಂತರಿಸುವ ಸಾಧ್ಯತೆಯೂ ಇದೆ. ಬಿಡುಗಡೆ ವೇಳೆ ಜನರು ಹೆಚ್ಚು ಸೇರುವ ಸಾಧ್ಯತೆ ಇದ್ದು, ಆಸ್ಪತ್ರೆ ಬಳಿ ಭದ್ರತೆ ಕೈಗೊಳ್ಳುವ ಬಗ್ಗೆಯೂ ಪೊಲೀಸರ ಜೊತೆ ಚರ್ಚಿಸಲಾಗಿದೆ’ ಎಂದೂ ತಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು