ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಜನವರಿ 27ರಂದು ಶಶಿಕಲಾ ಬಿಡುಗಡೆ

Last Updated 25 ಜನವರಿ 2021, 15:21 IST
ಅಕ್ಷರ ಗಾತ್ರ

ಚೆನ್ನೈ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪದ ಮೇಲೆ ಬಂಧಿತರಾಗಿ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಜನವರಿ 27ರಂದು ಬಿಡುಗಡೆಯಾಗಲಿದ್ದಾರೆ.

ಸದ್ಯ ಕೋವಿಡ್‌–19ಕ್ಕೆ ಶಶಿಕಲಾ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ, ಆಸ್ಪತ್ರೆಯಿಂದ ಮನೆಗೆ ತೆರಳುವ ದಿನಾಂಕ ನಂತರವೇ ತಿಳಿಯಲಿದೆ.

‘ನಮ್ಮ ನಿರೀಕ್ಷೆ ಪ್ರಕಾರ ಚಿನ್ನಮ್ಮಾ (ಶಶಿಕಲಾ) ಜನವರಿ 27ರಂದು ಬಿಡುಗಡೆಯಾಗಲಿದ್ದಾರೆ’ ಎಂದು ವಿ.ಕೆ. ಶಶಿಕಲಾ ಅವರ ಸಂಬಂಧಿ ಟಿ.ಟಿ.ವಿ. ದಿನಕರನ್‌ ಟ್ವೀಟ್‌ ಮಾಡಿದ್ದಾರೆ.

‘ಕೋವಿಡ್‌–19ನಿಂದ ಶಶಿಕಲಾ ಚಿನ್ನಮ್ಮಾ ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರ ಜತೆ ಸಮಾಲೋಚನೆ ನಡೆಸಿದ ಬಳಿಕವೇ ಆಸ್ಪತ್ರೆಯಿಂದ ಬಿಡುಗಡೆ ದಿನಾಂಕ ತಿಳಿಯಲಿದೆ’ ಎಂದು ದಿನಕರನ್‌ ತಿಳಿಸಿದ್ದಾರೆ.

ಜನವರಿ 20ರಂದು ಶಶಿಕಲಾಗೆ ಕೋವಿಡ್‌ ದೃಢಪಟ್ಟಿದ್ದರಿಂದ ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಂಭೀರ ಪರಿಸ್ಥಿತಿಯಾಗಿದ್ದರಿಂದ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT