ಎಎಪಿ 'ಸ್ಪಾ ಮತ್ತು ಮಸಾಜ್ ಪಕ್ಷ': ಬಿಜೆಪಿ ವ್ಯಂಗ್ಯ

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಸತ್ಯೇಂದ್ರ ಜೈನ್ ಅವರಿಗೆ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ ವಿಷಯದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಏಕೆ ಮೌನ ವಹಿಸುತ್ತಿದ್ದಾರೆ ಎಂದು ಪ್ರಶ್ನಿಸಿರುವ ಬಿಜೆಪಿ, ಸ್ಪಾ ಮತ್ತು ಮಸಾಜ್ ಪಕ್ಷವಾಗಿ ಎಎಪಿ ಮಾರ್ಪಟ್ಟಿದೆ ಎಂದು ವ್ಯಂಗ್ಯವಾಡಿದೆ.
ಇದನ್ನೂ ಓದಿ: Video: ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್
ಈ ಕುರಿತು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ವಕ್ತಾರ ಗೌರವ್ ಭಾಟಿಯಾ, ಕೇಜ್ರಿವಾಲ್ ಈಗ ಎಲ್ಲಿ ಅಡಗಿ ಕುಳಿತಿದ್ದಾರೆ. ಜೈಲಿನ ನಿಯಮಗಳನ್ನು ಉಲ್ಲಂಘಿಸಿ ಸತ್ಯೇಂದ್ರ ಜೈನ್ ಮಸಾಜ್ ಮಾಡಿಸಿಕೊಳ್ಳುತ್ತಿರುವುದನ್ನು ಕಾಣಬಹುದು. ಜೈಲಿನಲ್ಲಿನ ವಿವಿಐಪಿ ಸಂಪ್ರದಾಯ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಹೇಳಿದರು.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ಸತ್ಯೇಂದ್ರ ಜೈನ್ ಅವರಿಗೆ ವ್ಯಕ್ತಿಯೊಬ್ಬರು ಮಸಾಜ್ ಮಾಡುತ್ತಿರುವ ದೃಶ್ಯ ವಿಡಿಯೊದಲ್ಲಿದೆ. ಅಲ್ಲದೆ ಜೈಲಿನಲ್ಲಿ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.