ಬುಧವಾರ, ಅಕ್ಟೋಬರ್ 28, 2020
18 °C

ಭಾರತಕ್ಕೆ ತೆರಳುವ ವಿಮಾನ ಹಾರಾಟಕ್ಕೆ ಸೌದಿ ಅರೇಬಿಯಾ ಅನುಮತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಂದೇ ಭಾರತ್ ಮಿಷನ್ ಅಡಿ ಭಾರತಕ್ಕೆ ತೆರಳುವ ವಿಮಾನಗಳ ಹಾರಾಟಕ್ಕೆ ಸೌದಿ ಅರೇಬಿಯಾ ಅನುಮತಿ ನೀಡಿದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ತಿಳಿಸಿದೆ.

ಆದರೆ, ಭಾರತದಿಂದ ಸೌದಿ ಅರೇಬಿಯಾಕ್ಕೆ ಪ್ರಯಾಣಿಕ ವಿಮಾನಗಳು ಹಾರಾಟ ನಡೆಸುವುದಿಲ್ಲ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಟ್ವೀಟ್‌ ಮೂಲಕ ಸ್ಪಷ್ಟಪಡಿಸಿದೆ. 

ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇರುವುದರಿಂದ ಭಾರತ ಮತ್ತು ವಿವಿಧ ದೇಶಗಳಿಂದ ಬರುವ ಮತ್ತು ಹೋಗುವ ವಿಮಾನಗಳ ಹಾರಾಟವನ್ನು ಮಂಗಳವಾರ ಸೌದಿ ಅರೇಬಿಯಾ ನಿರ್ಬಂಧಿಸಿತ್ತು. 

ಈ ಸಂಬಂಧ ಸೌದಿಯ ನಾಗರಿಕ ವಿಮಾನಯಾನ ಪ್ರಾಧಿಕಾರವು (ಜಿಎಸಿಎ) ಆದೇಶ ಹೊರಡಿಸಿದ್ದು, ‘ಭಾರತದ ಜತೆಗೆ ಬ್ರೆಜಿಲ್ ಮತ್ತು ಅರ್ಜೆಂಟೈನಾ ದೇಶಗಳಿಗೂ ಈ ನಿರ್ಬಂಧ ಅನ್ವಯವಾಗಲಿದೆ. ಸೌದಿಗೆ ಆಗಮಿಸುವ 14 ದಿನಗಳ ಮುಂಚಿತವಾಗಿ ಪ್ರಸ್ತಾವನೆಯನ್ನು ನೀಡಿರುವ ಯಾವುದೇ ವ್ಯಕ್ತಿಗೂ ಇದು ಅನ್ವಯಿಸುತ್ತದೆ’ ಎಂದು ತಿಳಿಸಿತ್ತು. ಈ ಮೂರೂ ದೇಶಗಳಿಂದ ಅಧಿಕೃತ ಆಹ್ವಾನ ಹೊಂದಿರುವವರಿಗೆ ಮಾತ್ರವೇ ಸೌದಿಗೆ ಪ್ರಯಾಣಿಸಲು ಅವಕಾಶ ನೀಡಲಾಗುತ್ತದೆ ಎಂದು ಜಿಎಸಿಎ ತಿಳಿಸಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು