ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿವರ್ಷ ಜ.3ರಂದು ’ಸಾವಿತ್ರಿ ಉತ್ಸವ’: ಮಹಾರಾಷ್ಟ್ರ ಸರ್ಕಾರ ಘೋಷಣೆ

ಮಹಾರಾಷ್ಟ್ರ ಸರ್ಕಾರ ಘೋಷಣೆ: ಸಮಾಜ ಸುಧಾರಕಿ ಸಾವಿತ್ರಿಬಾಯಿ ಫುಲೆಗೆ ಗೌರವ
Last Updated 13 ಡಿಸೆಂಬರ್ 2020, 6:09 IST
ಅಕ್ಷರ ಗಾತ್ರ

ಮುಂಬೈ: ಸಮಾಜ ಸುಧಾರಕಿ, ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿದ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನವಾದ ಜನವರಿ 3ರಂದು ಪ್ರತಿ ವರ್ಷ ‘ಸಾವಿತ್ರಿ ಉತ್ಸವ’ ಹಮ್ಮಿಕೊಳ್ಳುವುದಾಗಿ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.

ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ.

‘ಸಾವಿತ್ರಿಬಾಯಿ ಫುಲೆ ಅವರು ಸಮಾಜ ಸುಧಾರಣೆಗಾಗಿ ನಡೆಸಿದ ಹೋರಾಟ, ಅವರ ಸಾಧನೆಯನ್ನು ಜನರಿಗೆ ತಿಳಿಸುವ ಸಂಬಂಧ ‘ಸಾವಿತ್ರಿ ಉತ್ಸವ’ದ ಅಂಗವಾಗಿ ರಾಜ್ಯದ ವಿವಿಧೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಶೋಮತಿ ಠಾಕೂರ್‌ ತಿಳಿಸಿದರು.

1831ರ ಜನವರಿ 3ರಂದು ಸಾವಿತ್ರಿಬಾಯಿ ಫುಲೆ ಜನಿಸಿದರು. ಮಹಿಳೆಯರ ಸಬಲೀಕರಣ, ಶಿಕ್ಷಣಕ್ಕಾಗಿ ಪತಿ ಜ್ಯೋತಿಬಾ ಫುಲೆ ಅವರೊಂದಿಗೆ ಅವರು ಹೋರಾಡಿದರು. ಅದರಲ್ಲೂ, ಲಿಂಗ ಮತ್ತು ಜಾತಿ ಆಧಾರದಲ್ಲಿ ಸಮಾಜದಲ್ಲಿ ನಡೆಯುತ್ತಿದ್ದ ತಾರತಮ್ಯವನ್ನು ನಿರ್ಮೂಲನೆ ಮಾಡಲು ಅವರು ನಡೆಸಿದ ಹೋರಾಟ ಅವಿಸ್ಮರಣೀಯ.

ಅವರು 1897ರಲ್ಲಿ ನಿಧನರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT