ಶನಿವಾರ, ಆಗಸ್ಟ್ 13, 2022
27 °C

ರೈತರ ಪ್ರತಿಭಟನೆ | ಸಮಸ್ಯೆ ಪರಿಹಾರಕ್ಕೆ ತಜ್ಞರ ಸಮಿತಿ: ಸುಪ್ರೀಂ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಸರ್ಕಾರದ ನಡುವೆ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು ಕೃಷಿ ತಜ್ಞರು ಮತ್ತು ರೈತ ಸಂಘಗಳ ಮುಖಂಡರನ್ನೊಳಗೊಂಡ ಸ್ವತಂತ್ರ ಸಮಿತಿಯನ್ನು ರಚಿಸಲು ಸುಪ್ರೀಂ ಕೋರ್ಟ್‌ ಹೇಳಿದೆ. 

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ನ್ಯಾಯಪೀಠ ‘ಕೃಷಿ ಚಿಂತಕ ಪಿ.ಸಾಯಿನಾಥ್ ಅವರಂತಹ ತಜ್ಞರು, ಸರ್ಕಾರ ಹಾಗೂ ರೈತ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸುವುದಾಗಿ' ಹೇಳಿದೆ.

ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೂ ಒಳಗೊಂಡ ನ್ಯಾಯಪೀಠ ‘ರೈತರ ಪ್ರತಿಭಟಿಸುವ ಹಕ್ಕನ್ನು ನಾವು ಒಪ್ಪಿಕೊಂಡಿದ್ದೇವೆ. ಆದರೆ, ಆ ಪ್ರತಿಭಟನೆ ಅಹಿಂಸಾತ್ಮಕವಾಗಿರಬೇಕು' ಎಂದು ಹೇಳಿದೆ.

ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಸಿದ ಪೀಠ, ‘ಪ್ರತಿಭಟನೆಯ ಉದ್ದೇಶ ಈಡೇರಬೇಕಾದರೆ ರೈತರು ಮತ್ತು ಸರ್ಕಾರದ ನಡುವೆ ಮಾತುಕತೆ ನಡೆಯಬೇಕು. ಮಾತುಕತೆ ನಡೆಸಲು ಅವಕಾಶ ಮಾಡಿಕೊಡುವುದಾಗಿ ನ್ಯಾಯಾಲಯ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು