ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಸೇತು: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

Last Updated 20 ಮಾರ್ಚ್ 2023, 11:20 IST
ಅಕ್ಷರ ಗಾತ್ರ

ನವದೆಹಲಿ: ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್‌ ಸೋಮವಾರ ಒಪ್ಪಿಗೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್‌.ನರಸಿಂಹ ಮತ್ತು ಜೆ.ಬಿ.ಪಾರ್ದಿವಾಲಾ ಅವರನ್ನು ಒಳಗೊಂಡ ನ್ಯಾಯಪೀಠವು, ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಅನುಮೋದನೆ ನೀಡಿದೆ.

‘ಕೇಂದ್ರ ಸರ್ಕಾರ ಒಂಬತ್ತು ವರ್ಷಗಳಿಂದ ಈ ವಿಷಯವನ್ನು ವಿಳಂಬ ಮಾಡುತ್ತಿದ್ದು, ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ’ ಎಂದು ಸ್ವಾಮಿ ಅರ್ಜಿಯಲ್ಲಿ ತಿಳಿಸಿದ್ದಾರೆ. ಇದನ್ನು ಉಲ್ಲೇಖಿಸಿದ ನ್ಯಾಯಪೀಠ, ಶೀಘ್ರವೇ ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿತು.

ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಎಂದು ಘೋಷಿಸುವ ಕುರಿತಂತೆ ಪರಿಶೀಲಿಸಲಾಗುತ್ತಿದೆ ಎಂದು ಜ. 19ರಂದು ಕೇಂದ್ರ ಸರ್ಕಾರ ತಿಳಿಸಿತ್ತು.

ತಮಿಳುನಾಡಿನ ಪಂಬನ್ ದ್ವೀಪದಿಂದ ಶ್ರೀಲಂಕಾದ ವಾಯವ್ಯ ಕರಾವಳಿಯ ಮನ್ನಾರ್ ದ್ವೀಪಕ್ಕೆ ಸಂಪರ್ಕಿಸುವ ಸುಣ್ಣದ ಕಲ್ಲಿನ ಸೇತುವೆಯೇ ರಾಮ ಸೇತು ಎನ್ನಲಾಗುತ್ತದೆ. ಇದಕ್ಕೆ ಆ್ಯಡಮ್‌ನ ಸೇತುವೆ ಎನ್ನುವ ಇನ್ನೊಂದು ಹೆಸರೂ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT