ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಫ್‌ಲೈನ್‌ ಪರೀಕ್ಷೆ ರದ್ದು; ವಿಚಾರಣೆಗೆ ‘ಸುಪ್ರೀಂ’ ಒಪ್ಪಿಗೆ

Last Updated 21 ಫೆಬ್ರುವರಿ 2022, 18:03 IST
ಅಕ್ಷರ ಗಾತ್ರ

ನವದೆಹಲಿ:ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮತ್ತು ಇತರ ಪರೀಕ್ಷಾ ಮಂಡಳಿಗಳು ಪ್ರಸಕ್ತ ವರ್ಷ ನಡೆಸಲಿರುವ 10 ಮತ್ತು 12ನೇ ತರಗತಿಗಳ ಆಫ್‌ಲೈನ್ (ಭೌತಿಕ) ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಗೆ ನೀಡಿದೆ.

ಕೋವಿಡ್-19ರ ಸಾಂಕ್ರಾಮಿಕ ಕಾಲಘಟ್ಟದಲ್ಲಿ ಭೌತಿಕ ಪರೀಕ್ಷೆ ನಡೆಸಬಾರದು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಪರಿಶೀಲಿಸಿದಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು, ‘ಈ ವಿಷಯ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ಅವರ ಪೀಠದ ಮುಂದೆ ಹೋಗಲಿ’ ಎಂದು ಸೂಚಿಸಿತು.

ಸಾಮಾಜಿಕ ಕಾರ್ಯಕರ್ತರಾದ ಅನುಭಾ ಶ್ರೀವಾಸ್ತವ ಸಹಾಯ್‌ ಅವರ ಪರ ಅರ್ಜಿ ಸಲ್ಲಿಸಿರುವ ವಕೀಲ ಪ್ರಶಾಂತ್‌ ಪದ್ಮನಾಭನ್‌, ಶಿಕ್ಷಣ ಮಂಡಳಿಗಳಿಗೆ ಪರ್ಯಾಯ ಮೌಲ್ಯಮಾಪನ ವಿಧಾನಗಳನ್ನು ರೂಪಿಸಲು ನಿರ್ದೇಶಿಸಬೇಕು ಎಂದೂ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಸಿಬಿಎಸ್‌ಇಯು 10 ಮತ್ತು 12ನೇ ತರಗತಿಯ ಎರಡನೇ ಹಂತದ ಬೋರ್ಡ್‌ ಪರೀಕ್ಷೆಗಳನ್ನು ಏಪ್ರಿಲ್‌ 26ರಿಂದ ನಡೆಸಲು ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT