ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶ ಪ್ರಯಾಣಕ್ಕೆ ಕಾರ್ತಿ ಚಿದಂಬರಂಗೆ ಸುಪ್ರೀಂಕೋರ್ಟ್‌ ಅನುಮತಿ

Last Updated 22 ಫೆಬ್ರುವರಿ 2021, 7:03 IST
ಅಕ್ಷರ ಗಾತ್ರ

ನವದೆಹಲಿ: ಕ್ರಿಮಿನಲ್‌ ಪ್ರಕರಣಗಳನ್ನು ಎದುರಿಸುತ್ತಿರುವ ಕಾಂಗ್ರೆಸ್‌ ಸಂಸ‌ದ ಕಾರ್ತಿ ಚಿದಂಬರಂಗೆ ವಿದೇಶ ಪ್ರಯಾಣ ಮಾಡಲು ಸುಪ್ರೀಂಕೋರ್ಟ್‌ ಸೋಮವಾರ ಅನುಮತಿ ನೀಡಿದೆ.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಅಶೋಕ್‌ ಭೂಷಣ್‌ ಅವರ ನೇತೃತ್ವದ ಪೀಠವು ‘ಕಾರ್ತಿ ಚಿದಂಬರಂಗೆ ವಿದೇಶ ಪ್ರಯಾಣಕ್ಕೆ ಅನುಮತಿ ನೀಡಿದೆ. ಆದರೆ ನ್ಯಾಯಾಲಯಕ್ಕೆ ಸ್ಥಳದ ಸಂಪೂರ್ಣ ಮಾಹಿತಿ ಸಲ್ಲಿಸಬೇಕು ಮತ್ತು ₹2 ಕೋಟಿ ಭದ್ರತಾ ಠೇವಣಿ ಇರಿಸಬೇಕು’ ಎಂದು ಹೇಳಿದೆ.

ಈ ಅರ್ಜಿಗೆ ವಿರೋಧ ವ್ಯಕ್ತಪಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು, ಕಳೆದ ಬಾರಿ ₹10 ಕೋಟಿ ಠೇವಣಿಯೊಂದಿಗೆ ಚಿದಂಬರಂ ಅವರಿಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಲಾಗಿತ್ತು ಎಂದು ಹೇಳಿದರು.

‘ಕಾರ್ತಿ ಚಿದಂಬರಂ ಅವರು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ₹2 ಕೋಟಿ ಠೇವಣಿ ಇರಿಸಬೇಕು. ಅವರಿಗೆ ಆರು ತಿಂಗಳ ಕಾಲ ವಿದೇಶಕ್ಕೆ ಪ್ರಯಣಿಸಲು ಅನುಮತಿ ನೀಡಲಾಗಿದೆ’ ಎಂದು ಸುಪ್ರೀಂಕೋರ್ಟ್‌ ಸೂಚಿಸಿದೆ.

ಕಾರ್ತಿ ಅವರು ಏರ್‌ಸೆಲ್‌ ಮ್ಯಾಕ್ಸಿಸ್‌ನಲ್ಲಿನ ಹಣಅಕ್ರಮ ವರ್ಗಾವಣೆ ಪ್ರಕರಣ, ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣವನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ಇಡಿ ಮತ್ತು ಸಿಬಿಐ ತನಿಖೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT