ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಉದ್ಧವ್ ಬಣದ ಶಿವಸೇನಾ ಶಾಸಕರ ಅನರ್ಹತೆ ಪ್ರಕ್ರಿಯೆಗೆ ಸುಪ್ರೀಂ ತಡೆ

Last Updated 11 ಜುಲೈ 2022, 7:37 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಬಣದಲ್ಲಿರುವ ಶಿವಸೇನಾದ ಶಾಸಕರಅನರ್ಹತೆಗೆ ಸಂಬಂಧಿಸಿದಯಾವುದೇ ಪ್ರಕ್ರಿಯೆ ಮುಂದುವರಿಸಬಾರದು ಎಂದು ಮಹಾರಾಷ್ಟ್ರದವಿಧಾನಸಭೆ ಸ್ಪೀಕರ್‌ ರಾಹುಲ್‌ ನಾರ್ವೇಕರ್‌ ಅವರಿಗೆ ಸುಪ್ರೀಂ ಕೋರ್ಟ್‌ಸೂಚಿಸಿದೆ.

ಉದ್ಧವ್‌ ಠಾಕ್ರೆ ಬಣದ ಮನವಿಗಳನ್ನು ಸೋಮವಾರ ಪಟ್ಟಿ ಮಾಡಲಾಗುವುದು. ನ್ಯಾಯಾಲಯದಲ್ಲಿಈ ವಿಚಾರ ಇತ್ಯರ್ಥವಾಗುವವರೆಗೆ ಅನರ್ಹತೆ ಪ್ರಕ್ರಿಯೆ ನಡೆಸದಂತೆ ಮನವಿ ಮಾಡುತ್ತೇನೆ ಎಂದುಕಪಿಲ್‌ ಸಿಬಲ್‌ ನೇತೃತ್ವದ ಹಿರಿಯ ವಕಿಲರ ತಂಡ,ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಹಾಗೂ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠದೆದುರು ಮನವಿ ಮಾಡಿದೆ.

ಇದೇ ವೇಳೆ ಸಿಬಲ್‌ ಅವರು,ಬಂಡಾಯ ಶಾಸಕರ ಅನರ್ಹಗೊಳಿಸುವಂತೆ ಈ ಹಿಂದೆ ಅರ್ಜಿಗಳು ಸಲ್ಲಿಕೆಯಾಗಿದ್ದಾಗ ಅವರನ್ನು ನ್ಯಾಯಾಲಯ ರಕ್ಷಿಸಿದೆ ಎಂದು ಹೇಳಿದ್ದಾರೆ.

ವಾದ ಆಲಿಸಿದಪೀಠವು,ಅನರ್ಹತೆಗೆ ಸಂಬಂಧಿಸಿದ ಪ್ರಕ್ರಿಯೆ ಆರಂಭಿಸಬಾರದು ಎಂದುವಿಧಾನಸಭೆ ಸ್ಪೀಕರ್‌ಗೆ ತಿಳಿಸುವಂತೆ ರಾಜ್ಯಪಾಲರ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಾಲಿಸಿಟರ್ ಜನರಲ್‌ ತುಷಾರ್‌ ಮೆಹ್ತಾ ಅವರಿಗೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT