ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಡಿಎ: 19 ಮಹಿಳೆಯರಿಗೆ ಮಾತ್ರ ಪ್ರವೇಶ–ವಿವರಣೆ ನೀಡಲು ‘ಸುಪ್ರೀಂ‘ ಸೂಚನೆ

Last Updated 18 ಜನವರಿ 2022, 10:55 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ವರ್ಷ ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ (ಎನ್‌ಡಿಎ) 19 ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ನೀಡುವುದಾಗಿ ನಿರ್ಬಂಧ ವಿಧಿಸಿರುವುದಕ್ಕೆ ಮೂರು ವಾರಗಳ ಒಳಗಾಗಿ ವಿವರಣೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಮಂಗಳವಾರ ಸೂಚಿಸಿತು.

ನ್ಯಾಯಮೂರ್ತಿಗಳಾದ ಸಂಜಯಕಿಶನ್‌ ಕೌಲ್ ಹಾಗೂ ಎಂ.ಎಂ.ಸುಂದ್ರೇಶ್‌ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.

ರಾಷ್ಟ್ರೀಯ ಇಂಡಿಯನ್‌ ಮಿಲಿಟರಿ ಕಾಲೇಜ್‌ (ಆರ್‌ಐಎಂಸಿ) ಹಾಗೂ ರಾಷ್ಟ್ರೀಯ ಮಿಲಿಟರಿ ಸ್ಕೂಲ್‌ (ಆರ್‌ಎಂಎಸ್‌) ಪ್ರವೇಶಕ್ಕೆ ಕಳೆದ ವರ್ಷ ನಡೆದ ಪ್ರವೇಶ ಪರೀಕ್ಷೆಗೆ ಮಹಿಳೆಯರು ಸೇರಿದಂತೆ ಹಾಜರಾಗಿದ್ದ ಅಭ್ಯರ್ಥಿಗಳ ಸಂಖ್ಯೆಯನ್ನು ತಿಳಿಸುವಂತೆ ಹೆಚ್ಚುವರಿ ಸಾಲಿಸಿಟರ್‌ ಜನರಲ್ ಐಶ್ವರ್ಯಾ ಭಾಟಿ ಅವರಿಗೆ ನ್ಯಾಯಪೀಠ ಸೂಚಿಸಿತು.

‘2022ನೇ ಸಾಲಿಗೆ 19 ಮಹಿಳೆಯರಿಗೆ ಮಾತ್ರ ಎನ್‌ಡಿಎಗೆ ಪ್ರವೇಶ ನೀಡುವುದಾಗಿ ಯುಪಿಎಸ್‌ಸಿ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 19 ಮಹಿಳೆಯರಿಗೆ ಮಾತ್ರ ಪ್ರವೇಶ ಎಂಬುದಾಗಿ ನಿಗದಿ ಮಾಡಿದ್ದು ಏಕೆ ಎಂಬ ಬಗ್ಗೆ ವಿವರಣೆ ನೀಡಬೇಕು’ ಎಂದು ನ್ಯಾಯಪೀಠ ಸೂಚಿಸಿತು.

‘ಮೂಲಸೌಕರ್ಯಗಳ ಕೊರತೆ ಕಾರಣ ನೀಡಿ, 2021ರಲ್ಲಿ 19 ಮಹಿಳೆಯರಿಗೆ ಪ್ರವೇಶ ನೀಡಲಾಗಿತ್ತು. ಈಗ, ಈ ವರ್ಷವೂ ಅಷ್ಟೇ ಸಂಖ್ಯೆಯಷ್ಟು ಮಹಿಳೆಯರಿಗೆ ಪ್ರವೇಶ ನೀಡಲು ನಿರ್ಧರಿಸಿದ್ದು ಏಕೆ’ ಎಂದು ಪ್ರಶ್ನಿಸಿದ ನ್ಯಾಯಪೀಠ, ‘ಕಳೆದ ವರ್ಷ ಅಭ್ಯರ್ಥಿಗಳ ಸಂಖ್ಯೆಯನ್ನು 19ಕ್ಕೆ ನಿಗದಿ ಮಾಡಿದ್ದು ತಾತ್ಕಾಲಿಕ ಕ್ರಮವಾಗಿತ್ತು. ಆ ಕ್ರಮ ಎಲ್ಲ ಕಾಲಕ್ಕೂ ಅನ್ವಯವಾಗದು’ ಎಂದು ಹೇಳಿತು.

ಅರ್ಜಿ ವಿಚಾರಣೆಯನ್ನು ಮಾರ್ಚ್‌ 6ಕ್ಕೆ ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT