ಭಾನುವಾರ, ನವೆಂಬರ್ 29, 2020
25 °C

ಮಹಾರಾಷ್ಟ್ರ: ದಸರಾ ಮೆರವಣಿಗೆ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಎಸ್‌ಡಿಎಂಎಗೆ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌ ನಡುವೆಯೂ ದಸರಾ ಮೆರವಣಿಗೆ ನಡೆಸಲು ಅನುಮತಿ ನೀಡುವಂತೆ ಕೋರಿ ನಾಂದೇಡ್‌ ಗುರುದ್ವಾರ ಅಡಳಿತ ಮಂಡಳಿ ಸಲ್ಲಿಸಿರುವ ಅರ್ಜಿಯ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂಕೋರ್ಟ್‌ ಮಹಾರಾಷ್ಟ್ರ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ (ಎಸ್‌ಡಿಎಂಎ) ಸೂಚಿಸಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗೇಶ್ವರ ರಾವ್‌ ನೇತೃತ್ವದ ಪೀಠವು ವಾಸ್ತವ ಸ್ಥಿತಿಯನ್ನು ಪರಿಗಣಿಸಿ ದಸರಾ ಮೆರವಣಿಗೆ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದೆ. 

ಮಂಡಳಿಯು ಸಾಂಪ್ರದಾಯಿಕ ರೀತಿಯಲ್ಲಿ ದಸರಾ ಮೆರವಣಿಗೆ ನಡೆಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದೆ. ಆದರೆ, ಮಹಾರಾಷ್ಟ್ರ ಸರ್ಕಾರವು ಕೊರೊನಾ ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಸಾಂಪ್ರದಾಯಿಕವಾಗಿ ದಸರಾ ಮೆರವಣಿಗೆ ನಡೆಸುವುದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ. ಈ ಪರಿಸ್ಥಿತಿಯಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದಿಲ್ಲ ಎಂದು ಹೇಳಿತ್ತು.

ಈ ಹಿನ್ನೆಲೆಯಲ್ಲಿ ನಾಂದೇಡ್‌ ಗುರುದ್ವಾರ ಆಡಳಿತ ಮಂಡಳಿ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ದಸರಾ ಮೆರವಣಿಗೆ ನಡೆಸಲು ಅನುಮತಿ ನೀಡುವ ಬಗ್ಗೆ  ಎಸ್‌ಡಿಎಂಎ ತೆಗೆದುಕೊಳ್ಳುವ ನಿರ್ಧಾರದಿಂದ ಸಮಾಧಾನವಾಗದಿದ್ದರೆ ಮಂಡಳಿಯು ಬಾಂಬೆ ಹೈಕೋರ್ಟ್‌ ಮೊರೆ ಹೋಗಬಹುದು ಎಂದು ಸುಪ್ರೀಂಕೋರ್ಟ್‌ನ‌ ಪೀಠ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು