ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್‌ನಲ್ಲೇ ನೀಟ್‌ ಬಗ್ಗೆ ಯೋಚಿಸಿ: ಸುಪ್ರೀಂ ಕೋರ್ಟ್‌

Last Updated 24 ಆಗಸ್ಟ್ 2020, 18:37 IST
ಅಕ್ಷರ ಗಾತ್ರ

ನವದೆಹಲಿ: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಇರುವ ‘ನೀಟ್’ ಅನ್ನು ‌ಮುಂದಿನ ವರ್ಷದಿಂದ ಆನ್‌ಲೈನ್‌ನಲ್ಲೇ ನಡೆಸುವ ಕುರಿತು ಚಿಂತಿಸಲುರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಹಾಗೂ ಭಾರತೀಯ ವೈದ್ಯಕೀಯ ಮಂಡಳಿಗೆ (ಎಂಸಿಐ) ಸುಪ್ರೀಂ ಕೋರ್ಟ್‌ ಸೋಮವಾರ ಸೂಚಿಸಿದೆ.

ಜೆಇಇ ರೀತಿಯೇ ಆನ್‌ಲೈನ್‌ನಲ್ಲಿ‌ ನೀಟ್‌ ನಡೆಸುವ ಸಲಹೆಗಳನ್ನು ಪರಿಗಣಿಸಿ ಎಂದು ನ್ಯಾಯಮೂರ್ತಿ ಎಲ್‌.ನಾಗೇಶ್ವರ ರಾವ್‌ ಅವರಿದ್ದ ಪೀಠವು ಸೂಚಿಸಿದೆ. ವಿದೇಶಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯವಾಗುವಂತೆ ಮಧ್ಯಪ್ರಾಚ್ಯ ಹಾಗೂ ಗಲ್ಫ್‌ ರಾಷ್ಟ್ರಗಳಲ್ಲಿ ನೀಟ್‌ ಕೇಂದ್ರಗಳನ್ನು ಸ್ಥಾಪಿಸಲು ಎನ್‌ಟಿಎಗೆ ನಿರ್ದೇಶಿಸಬೇಕು ಎಂದು ಕೋರಿ ಅಬ್ದುಲ್‌ ಅಜೀಜ್‌ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ಪೀಠ ತಿರಸ್ಕರಿಸಿತು.

ಕ್ವಾರಂಟೈನ್‌ ವಿನಾಯಿತಿ: ಪರೀಕ್ಷೆ ಬರೆಯಲು ಆಗಮಿಸುವವರಿಗೆ 14 ದಿನಗಳ ಕ್ವಾರಂಟೈನ್‌ ನಿಯಮದಿಂದ ವಿನಾಯಿತಿಗೆ ಆಯಾ ರಾಜ್ಯ ಸರ್ಕಾರಗಳನ್ನೇ ಸಂಪರ್ಕಿಸಲು ಪೀಠ ಒಪ್ಪಿಗೆ ನೀಡಿದೆ.

ಎಂಜಿನಿಯರಿಂಗ್‌ ಕಾಲೇಜುಗಳ ಪ್ರವೇಶಕ್ಕೆ ಇರುವ ಜೆಇಇಗೆ ಎನ್‌ಟಿಎ ವಿದೇಶಗಳಲ್ಲಿ ಕೇಂದ್ರ ಸ್ಥಾಪಿಸಿತ್ತು. ಇದೇ ರೀತಿ ನೀಟ್‌ಗೂ ಕೇಂದ್ರಗಳನ್ನು ತೆರೆಯಬೇಕು ಎಂದು ಅರ್ಜಿದಾರರು ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT