ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಂಬೆ ಹೈಕೋರ್ಟ್‌ ಸಂಪರ್ಕಿಸಲು ರಿಪಬ್ಲಿಕ್ ಟಿವಿಗೆ ಸುಪ್ರೀಂ ಸೂಚನೆ

ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್‌ಪಿ) ಹಗರಣ
Last Updated 15 ಅಕ್ಟೋಬರ್ 2020, 9:24 IST
ಅಕ್ಷರ ಗಾತ್ರ

ನವದೆಹಲಿ: ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್‌ಪಿ) ಹಗರಣದ ವಿಚಾರಣೆಗೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಅನ್ನು ಸಂಪರ್ಕಿಸಲು ಸುಪ್ರೀಂ ಕೋರ್ಟ್ ಗುರುವಾರ ರಿಪಬ್ಲಿಕ್ ಮೀಡಿಯಾ ಗ್ರೂಪ್‌ಗೆ ಸೂಚಿಸಿದೆ.

‘ಕೋವಿಡ್‌–19ರ ಸಾಂಕ್ರಾಮಿಕ ಅವಧಿಯಲ್ಲಿ ಮುಂಬೈ ಹೈಕೋರ್ಟ್‌ ಕಾರ್ಯನಿರ್ವಹಿಸುತ್ತಿದೆ. ರಿಪಬ್ಲಿಕ್ ಮೀಡಿಯಾ ಗ್ರೂಪ್‌ ಕಚೇರಿ ವರ್ಲಿ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ, ಈ ಪ್ರಕರಣದ ವಿಚಾರಣೆಗೆ ಮುಂಬೈ ಹೈಕೋರ್ಟ್‌ ಸಂಪರ್ಕಿಸುವಂತೆನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಇಂದು ಮಲ್ಹೋತ್ರಾ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ಪೀಠ ಸೂಚಿಸಿದೆ.

ಮಾಧ್ಯಮದ ಪರವಾಗಿ ಹಾಜರಾದ ಹಿರಿಯ ವಕೀಲ ಹರೀಶ್ ಸಾಳ್ವೆ, ’ಪೊಲೀಸ್ ಆಯುಕ್ತರು ಸಂದರ್ಶನಗಳನ್ನು ನೀಡುವಲ್ಲಿ ನಿರತರಾಗಿದ್ದು,ಪ್ರಕರಣದ ತನಿಖೆ ವಿಳಂಬವಾಗುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ರಿಪಬ್ಲಿಕ್‌ ಮೀಡಿಯಾ ಗ್ರೂಪ್‌ಗೆ ನೋಟಿಸ್ ಜಾರಿ ಮಾಡಿ, ಸಂಸ್ಥೆಯ ಮುಖ್ಯ ಹಣಕಾಸು ಅಧಿಕಾರಿ ಎಸ್ ಸುಂದರಂ ಅವರನ್ನು ತನಿಖೆಗೆ ಹಾಜರಾಗುವಂತೆ ತಿಳಿಸಿದ್ದರು.ರಿಪಬ್ಲಿಕ್ ಮೀಡಿಯಾ ನೆಟ್‌ವಕ್‌ನ ಮಾಲೀಕತ್ವ ಹೊಂದಿರುವ ಆರ್ಗ್‌ ಔಟ್‌ಲಿಯರ್‌ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಈ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT