ಶನಿವಾರ, 27 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರ್ಯಾದಗೇಡು ಹತ್ಯೆ: ಆರೋಪಿಗೆ ಕೋರ್ಟ್‌ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ

Last Updated 12 ಜುಲೈ 2021, 8:25 IST
ಅಕ್ಷರ ಗಾತ್ರ

ನವದೆಹಲಿ: ‘ಮರ್ಯಾದಗೇಡು ಹತ್ಯೆ‘ ಪ್ರಕರಣವೊಂದರ ಆರೋಪಿಗೆ ರಾಜಸ್ಥಾನ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಸೋಮವಾರ ರದ್ದುಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠವು ಪ್ರಕರಣದ ಆರೋಪಿ ಮುಖೇಶ್ ಚೌಧರಿಯನ್ನು ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ಕೇಳಿದೆ.

ರಾಜಸ್ಥಾನದ ಜೈಪುರದ ಯುವತಿ ಮಮತಾ, ಕೇರಳದ ಯುವಕ ಅಮಿತ್ ನಾಯರ್ ಅವರನ್ನು 2015ರಲ್ಲಿ ವಿವಾಹವಾಗಿದ್ದರು. ಪೋಷಕರ ಆಶಯಕ್ಕೆ ವಿರುದ್ಧವಾಗಿ ಅನ್ಯಜಾತಿಯ ಹುಡುಗನನ್ನು ವಿವಾಹವಾಗಿದ್ದಾಳೆ ಎಂಬ ಕಾರಣಕ್ಕೆ ಮಮತಾಳ ಸಹೋದರ ಮುಖೇಶ್ ಚೌಧರಿ, ಅಮಿತ್‌ ನಾಯರ್‌ನನ್ನು 2017ರಲ್ಲಿ ಹತ್ಯೆ ಮಾಡಿದ್ದ ಎಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಖೇಶ್‌ ಚೌಧರಿಗೆ ರಾಜಸ್ಥಾನ ಹೈಕೋರ್ಟ್‌ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ, ಆತನ ಸಹೋದರಿ ಮಮತಾ ನಾಯರ್‌, ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಮುಖೇಶ್ ಚೌಧರಿಗೆ ವಿಚಾರಣಾ ನ್ಯಾಯಾಲಯದ ಎದುರು ಶರಣಾಗುವಂತೆ ಸೂಚಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT