ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಲಿಂಗ ವಿವಾಹ: ಎಲ್ಲ ಬಾಕಿ ಪ್ರಕರಣಗಳನ್ನು ತನಗೇ ವರ್ಗಾಯಿಸಿಕೊಂಡ ‘ಸುಪ್ರೀಂ’

ಫೆ. 15ರೊಳಗೆ ಪ್ರತಿಕ್ರಿಯಿಸುವಂತೆ ಸೂಚನೆ ನೀಡಿದ ನ್ಯಾಯಪೀಠ
Last Updated 6 ಜನವರಿ 2023, 11:11 IST
ಅಕ್ಷರ ಗಾತ್ರ

ನವದೆಹಲಿ: ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡುವ ವಿಷಯದ ಕುರಿತು ದೇಶದಾದ್ಯಂತ ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿ ಉಳಿದಿರುವ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಒಟ್ಟುಗೂಡಿಸಿ ತನಗೇ ವರ್ಗಾಯಿಸಿಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಹಾಗೂ ಜೆ.ಪಿ. ಪರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠವು, ಫೆ. 15ರೊಳಗೆ ಎಲ್ಲಾ ಅರ್ಜಿಗಳಿಗೆ ಜಂಟಿ ಉತ್ತರವನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತು ಮತ್ತು ಎಲ್ಲಾ ಅರ್ಜಿಗಳನ್ನು ಮಾರ್ಚ್‌ನಲ್ಲಿ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿದೆ.

ಒಂದು ವೇಳೆ ಯಾವುದೇ ಅರ್ಜಿದಾರರು ವಿಚಾರಣೆಗೆ ನ್ಯಾಯಾಲಯಕ್ಕೆ ಭೌತಿಕವಾಗಿ ಹಾಜರಾಗಲು ಸಾಧ್ಯವಾಗದಿದ್ದರೆ, ವರ್ಚುವಲ್ ವೇದಿಕೆಯ ಮೂಲಕವೂ ಹಾಜರಾಗಬಹುದು ಎಂದೂ ನ್ಯಾಯಪೀಠವು ತಿಳಿಸಿದೆ.

2022ರ ನವೆಂಬರ್ 25ರಂದು ಇಬ್ಬರು ಸಲಿಂಗಕಾಮಿ ದಂಪತಿ ತಮ್ಮ ವಿವಾಹದ ಹಕ್ಕನ್ನು ಜಾರಿಗೊಳಿಸಲು ಮತ್ತು ವಿಶೇಷ ವಿವಾಹ ಕಾಯ್ದೆಯಡಿಯಲ್ಲಿ ತಮ್ಮ ವಿವಾಹವನ್ನು ನೋಂದಾಯಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಪ್ರತ್ಯೇಕ ಮನವಿ ಸಲ್ಲಿಸಿದ್ದರು. ಈ ಸಂಬಂಧ ಕೇಂದ್ರ ಸರ್ಕಾರವು ತನ್ನ ಪ್ರತಿಕ್ರಿಯೆ ನೀಡಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT