ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಹೈಕೋರ್ಟ್‌ಗೆ 6 ನ್ಯಾಯಮೂರ್ತಿಗಳನ್ನು ಕಾಯಂಗೊಳಿಸುವ ಪ್ರಸ್ತಾವಕ್ಕೆ ಅಸ್ತು

ಸುಪ್ರೀಂ ಕೋರ್ಟ್‌ ಕೊಲಿಜಿಯಂ ಒಪ್ಪಿಗೆ
Last Updated 19 ಆಗಸ್ಟ್ 2021, 16:04 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದ ಹೈಕೋರ್ಟ್‌ಗೆ ಆರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಕಾಯಂಗೊಳಿಸುವ ನೇಮಕಾತಿ ಪ್ರಸ್ತಾವನೆಗೆ ಸುಪ್ರೀಂಕೋರ್ಟ್‌ ಕೊಲಿಜಿಯಂ ಅನುಮೋದನೆ ನೀಡಿದೆ.

ಆಗಸ್ಟ್‌ 17ರಂದು ನಡೆದ ಸಭೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ ನೇತೃತ್ವದ ಕೊಲಿಜಿಯಂ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.

ನ್ಯಾಯಮೂರ್ತಿಗಳಾದ ನೇರನಹಳ್ಳಿ ಶ್ರೀನಿವಾಸನ್ ಸಂಜಯ್ ಗೌಡ, ಜ್ಯೋತಿ ಮೂಲಿಮನಿ, ನಟರಾಜ ರಂಗಸ್ವಾಮಿ, ಹೇಮಂತ್ ಚಂದನಗೌಡರ್‌, ಪ್ರದೀಪ್ ಸಿಂಗ್ ಯೆರೂರ್ ಮತ್ತು ಮಹೇಶನ್ ನಾಗಪ್ರಸನ್ನ್‌ ಅವರನ್ನು ಕಾಯಂ ನ್ಯಾಯಮೂರ್ತಿಗಳಿಗಾಗಿ ನೇಮಕ ಮಾಡಲಾಗಿದೆ.

ಕಲ್ಕತ್ತ ಹೈಕೋರ್ಟ್‌ನ ನ್ಯಾಯಮೂರ್ತಿ ಕೌಶಿಕ್‌ ಚಂದಾ ಅವರನ್ನು ಕಾಯಂ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡುವ ‍ಪ್ರಸ್ತಾವಕ್ಕೂ ಕೊಲಿಜಿಯಂ ಅನುಮೋದನೆ ನೀಡಿದೆ.

ಈ ಕೊಲಿಜಿಯಂನಲ್ಲಿ ನ್ಯಾಯಮೂರ್ತಿಗಳಾದ ಯು.ಯು ಲಲಿತ್ಮತ್ತು ಎ.ಎಂ.ಖಾನ್‌ವಿಲ್ಕರ್ ಕೂಡ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT