ನವದೆಹಲಿ: ವಿವಿಧ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಒಟ್ಟು ಎಂಟು ಹೆಸರುಗಳನ್ನು ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಮೂವರು ಸದಸ್ಯರಿರುವ ಕೊಲಿಜಿಯಂ, ಇದರ ಜೊತೆಗೆ ನಾಲ್ಕು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆಗೂ ಶಿಫಾರಸು ಮಾಡಲು ತೀರ್ಮಾನಿಸಿದೆ ಎಂದು ತಿಳಿಸಿವೆ.
ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಎ.ಎಂ.ಖಾನ್‌ವಿಲ್ಕರ್ ಅವರು ಕೊಲಿಜಿಯಂನ ಇತರ ಸದಸ್ಯರು. ಇದರ ಹೊರತಾಗಿ ವಿವಿಧ ಹೈಕೋರ್ಟ್‌ಗಳ 27 ನ್ಯಾಯಮೂರ್ತಿಗಳ ವರ್ಗಾವಣೆಗೂ ಶಿಫಾರಸು ಮಾಡಿದೆ ಎಂದು ಇವೇ ಮೂಲಗಳು ಹೇಳಿವೆ.
ಗುರುವಾರ ಮತ್ತು ಶುಕ್ರವಾರ ನಡೆದ ಸರಣಿ ಸಭೆಗಳ ನಂತರ ಪ್ರಮುಖ ಬದಲಾವಣೆ ಹಾಗೂ ನ್ಯಾಯಮೂರ್ತಿಗಳ ನೇಮಕ ಕುರಿತ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.
ವರ್ಗಾವಣೆ ಮತ್ತು ನೇಮಕಾತಿ ಕುರಿತ ಕೊಲಿಜಿಯಂನ ತೀರ್ಮಾನಗಳನ್ನು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಇನ್ನೂ ಪ್ರಕಟಿಸಬೇಕಾಗಿದೆ ಎಂದೂ ವಿವರಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.